ಧಾರವಾಡ | ಲಾರಿ-ಕಾರು ನಡುವೆ ಅಪಘಾತ; ಮೂವರು ದುರ್ಮರಣ

Date:

ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.

ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ ಈ ಅವಘಡ ಸಂಭವಿಸಿದ್ದು, ವೇಗವಾಗಿ ಹೋಗುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಬೆಳಗಾವಿ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತರೆಲ್ಲರೂ ಅರಸೀಕೆರೆ ಚನ್ನರಾಯಪಟ್ಟಣದವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಜಿಲ್ಲೆ ಕೆ ಆರ್ ನಗರದ ಪುಟ್ಟೇಗೌಡ (33), ಹಾಸನ ಜಿಲ್ಲೆ ಹೊಳೆನರಸಿಪುರದ ದೀಪಕ್ (24) ಹಾಗೂ ಹೊಳೆನರಸಿಪುರದ ಚಂದನಗೌಡ (22) ಮೃತರು. ಗಾಯಗೊಂಡ ಇನ್ನೊಬ್ಬನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಫಲ್ಗುಣಿ ನದಿಗೆ ತ್ಯಾಜ್ಯ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...