ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ | ಮಣಿಕಂಠ ರಾಠೋಡ ವಿರುದ್ಧ ಪಾಟ್ನಾದಲ್ಲಿ ಪ್ರಕರಣ ದಾಖಲು

Date:

  • ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್‌ ಮಾಡ್ತಿನಿ ಎಂದಿದ್ದ ಆರೋಪಿ
  • ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ

‘ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ’ ಎಂದಿರುವ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ವಿರುದ್ಧ ಪಟ್ನಾದಲ್ಲಿ ಪ್ರಕರಣ ದಾಖಲಾಗಿದೆ.

ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಮುಗಿಸುವ ಉದ್ದೇಶವನ್ನು ವ್ಯಕ್ತಪಡಿಸಿರುವುದು ಖಂಡನೀಯ. ನಾವು ಈ ಬಗ್ಗೆ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ಅಜಿತ್ ಶರ್ಮಾ ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ (ಎಸ್‌ಸಿ ಮೀಸಲು) ಕ್ಷೇತ್ರದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಣಿಕಂಠ ರಾಠೋಡ, ವ್ಯಕ್ತಿಯೊಬ್ಬರ ಜೊತೆಗಿನ ಮೊಬೈಲ್‌ ಸಂಭಾಷಣೆ ವೇಳೆ ಹೇಳಿದ್ದಾರೆ ಎನ್ನಲಾದ ಮಾತು ದೇಶದಾದ್ಯಂತ ವಿವಾದ ಸೃಷ್ಟಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ – ದೇವನೂರರ ನೇತೃತ್ವದಲ್ಲಿ ಪ್ರತಿಭಟನೆ

ಆದರೆ, ಕಾಂಗ್ರೆಸ್‌ ನಾಯಕರ ಆರೋಪವನ್ನು ಅಲ್ಲಗಳೆದಿದ್ದ ಮಣಿಕಂಠ ರಾಠೋಡ, ನನ್ನ ವಿರುದ್ಧ ಸುಳ್ಳು ಆರೋಪ ಮಾಡಲು ಯಾರೋ ಮಾತನಾಡಿರುವ ಆಡಿಯೋ ಬಹಿರಂಗಪಡಿಸಲಾಗಿದೆ. ನಾನು ಮಾತನಾಡಿದ ಆಡಿಯೋ ಇದ್ದರೆ ಹಾಕಿ ಎಂದು ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...