ಬೀದರ್‌ | ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಪ್ರಕರಣ; ಪತಿಗೆ 2 ವರ್ಷ ಜೈಲು ಶಿಕ್ಷೆ

Date:

ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ ಬೀದರ್‌ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಾರಾಗೃಹ ಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ.

2016ರ ಜನವರಿ 11ರಂದು ಜಿಲ್ಲೆಯ ಔರಾದ್‌ ತಾಲ್ಲೂಕಿನ ಬೇಲೂರ (ಎನ್‌) ಗ್ರಾಮದಲ್ಲಿ ಶಿವಾಜಿ ವಗ್ಗೆನೋರ್‌ ಎಂಬಾತ ತನ್ನ ಪತ್ನಿ ಪೂಜಾಳೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ನಿಂದಿಸಿ, ಬಿದಿರಿನ ಬಡಿಗೆಯಿಂದ ಮನಬಂದಂತೆ ಥಳಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಈ ಕುರಿತು ಸಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಬೀದರ್‌ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಚಿನ್‌ ಕೌಶಿಕ್‌ ಆರ್‌.ಎನ್‌. ಅವರು ಅಪರಾಧಿ ಶಿವಾಜಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ನ್ಯಾಯ ಸಂಹಿತೆ ಕಲಂ 498 (ಎ) ಅಡಿ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ, ₹3 ಸಾವಿರ ದಂಡ, ದಂಡ ನೀಡದಿದ್ದಲ್ಲಿ 2 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಬೇಕು. ಕಲಂ 324ರ ಅಡಿ 2 ವರ್ಷ ಸಾದಾ ಜೈಲು ಶಿಕ್ಷೆ, ₹3 ಸಾವಿರ ದಂಡ, ಕಲಂ 504ರ ಅಡಿ ಆರು ತಿಂಗಳು ಸಾದಾ ಜೈಲು ಶಿಕ್ಷೆ, ₹2 ಸಾವಿರ ದಂಡ, ಕಲಂ 506ರ ಅಡಿ ಆರು ತಿಂಗಳು ಸಾದಾ ಜೈಲು ಶಿಕ್ಷೆ, ₹2 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೇವಲ ₹12 ರೂಪಾಯಿಯಲ್ಲಿ ಬಡವರ ಹಸಿವು ನೀಗಿಸುತ್ತಿರುವ ಶಿಕ್ಷಕ ಬಸವರಾಜ್

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶರಣಗೌಡ ಅವರು ವಾದ ಮಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...