ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎಂದು ದೂರು ದಾಖಲಾಗಿದೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ದುರುಳರು ಅತ್ಯಾಚಾರ ಎಸಗುತ್ತಿರುವುದನ್ನು ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿ ವಿಕೃತಿ ಮೆರೆದಿದ್ದಾರೆ ಎನ್ನಲಾಗಿದೆ.
ವಿಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರಿಗೆ ಸಂತ್ರಸ್ತೆ ಸಹೋದರ ದೂರು ನೀಡಿದ್ದಾರೆ.
ಇದಲ್ಲದೆ ವಿಡಿಯೋ ಕಳುಹಿಸಿದ ದುರುಳರು ನಂತರ ಡಿಲೀಟ್ ಮಾಡಿದ್ದಾರೆ. ಅಷ್ಟರಲ್ಲಿ ತನ್ನ ಸ್ನೇಹಿತನ ಮೊಬೈಲ್‌ಗೆ ಸಂತ್ರಸ್ತೆ ಸಹೋದರ ವಿಡಿಯೋ ಫಾರ್ವರ್ಡ್ ಮಾಡಿಕೊಂಡಿದ್ದು, ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
ಇದನ್ನೂ ಓದಿ: ಹಾಸನ | ಜಾತಿ-ಆದಾಯ ದೃಢೀಕರಣ ನೀಡಲು ಕಂಬ ಸುತ್ತಿಸಿದ ಸಮಿತಿ; ₹2 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ಬುದ್ದಿಮಾಂದ್ಯ ಯುವತಿ ಮೇಲೆ ನಡೆದ ಅತ್ಯಾಚಾರ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.





