ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

Date:

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ ಡಿ(55) ಮೃತಪಟ್ಟವರು.

“ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ”ವೆಂದು ಆರೋಪಿಸಿ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ, ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಇಲ್ಲಿನ ವೈದ್ಯರು, ʼದೇಹವು ಶೇ.80ರಷ್ಟು ಸುಟ್ಟು ಹೋಗಿತ್ತುʼ ಎಂದು ತಿಳಿಸಿದ್ದರು. ಇದೀಗ ರೈತ ಮಂಜೇಗೌಡ ಮೃತಪಟ್ಟಿದ್ದಾರೆ.

ಈ ಘಟನೆ ಖಂಡಿಸಿ ಕನ್ನಡಪರ ಮತ್ತು ರೈತಪರ ಹೋರಾಟಗಾರರು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದ್ದು, “ಹೊತ್ತಿ ಉರಿದ ರೈತನಿಗೆ ನ್ಯಾಯ ಕೊಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಕ್ರೋಶ ಹೊರಹಾಕಿದರು.

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೋರಾಟಗಾರ ನಗರಕೆರೆ ಜಗದೀಶ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ರೈತಪರ, ಜನಪರವೆಂದು ಹೇಳಿಕೊಳ್ಳುವ ಸರ್ಕಾರ ಮತ್ತು ಸ್ಥಳೀಯ ಇಲಾಖೆಗಳ ಅಧಿಕಾರಿಗಳೇ ರೈತರ ಆತ್ಮಹತ್ಯೆಗೆ ನೇರ ಹೊಣೆ. ಇದೊಂದು ವ್ಯವಸ್ಥೆಯಿಂದಾಗಿರುವ ಕೊಲೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ನವೆಂಬರ 7ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಕಬ್ಬು ಬೆಳೆಗಾರರ ನಿರ್ಧಾರ

“ಮೃತ ರೈತ ಬಹುತೇಕ ದಿನಗಳಿಂದ ಕೆ ಆರ್‌ ಪೇಟೆ ತಹಶೀಲ್ದಾರ್‌, ಕಂದಾಯ ಇಲಾಖೆಗಳಿಗೆಲ್ಲ ಹಲವು ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿದ್ದಾರೆ. ಆಗಲೂ ತಮ್ಮ ಅಹವಾಲಿಗೆ ಸೂಕ್ತ ಪ್ರತಿಕ್ರಿಯೆ ದೊರೆಯದಿದ್ದಾಗ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೊಂದು ನೇರವಾಗಿ ಅಧಿಕಾರಿಗಳಿಂದಾದ ಕೊಲೆಯಂದೇ ಹೇಳಬಹುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...