ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ನಿಖರವಾಗಿ ತಿಳಿದು ಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.




