ಬೀದರ್‌ | ಸ್ವಾಭಿಮಾನಿ ಕಲ್ಯಾಣ ಪರ್ವಕ್ಕೆ ಅದ್ದೂರಿ ಚಾಲನೆ

Date:

ಸರ್ವರ ಹೃದಯದಲ್ಲಿ ಚಿರಸ್ಥಾಯಿಯಾಗಿ ನಿಲ್ಲಬಲ್ಲ ಏಕೈಕ ಸಾಹಿತ್ಯವೇ ವಚನ ಸಾಹಿತ್ಯವಾಗಿದೆ ಎಂದು ಹಾರಕೂಡ ಶ್ರೀಮಠದ ಡಾ.ಚೆನ್ನವೀರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಬಸವಕಲ್ಯಾಣ ನಗರದ ಎಂ.ಎಂ.ಬೇಗ್ ಸಭಾಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜ ಮತ್ತು ಅಕ್ಕನಾಗಲಾಂಬಿಕಾ ಮಹಿಳಾ ಗಣದ ವತಿಯಿಂದ ಆಯೋಜಿಸಿದ ಮೂರನೇ ಸ್ವಾಭಿಮಾನಿ ಕಲ್ಯಾಣ ಪರ್ವ ಉದ್ಘಾಟಿಸಿ ಮಾತನಾಡಿದರು.

ʼಬಸವ ವಚನ ಪಠಣದಿಂದ ವ್ಯಕ್ತಿಯ ಉದ್ವೇಗ ಮತ್ತು ಕೆಟ್ಟ ಚಿಂತೆಗಳು ದೂರವಾಗುತ್ತವೆ. ಜನರ ಹೃದಯ ಬೆಳಗುವ ಸಾಹಿತ್ಯವೇ ವಚನ ಸಾಹಿತ್ಯವಾಗಿದೆ. ಪ್ರತಿದಿನ ಕನಿಷ್ಠ ಐದು ವಚನಗಳನ್ನು ಪಠಿಸಬೇಕು. ಡಾ.ಚನ್ನಬಸವಾನಂದ ಸ್ವಾಮೀಜಿ ಅವರು ದೇಶ-ವಿದೇಶಗಳಲ್ಲಿ ಬಸವತತ್ವದ ಕೀರ್ತಿ ಪತಾಕೆ ಹಾರಿಸುತಿದ್ದಾರೆ. ವಚನ ಸಾಹಿತ್ಯದ ಪ್ರಸಾರ ನಡೆಸುತ್ತಿದ್ದಾರೆ. ಅವರ ಕಾರ್ಯಕ್ಕೆ ಸದಾ ನಮ್ಮ ಸಹಕಾರವಿರುತ್ತದೆʼ ಎಂದು ಶ್ರೀಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಭಿಮಾನಿ ಕಲ್ಯಾಣ ಪರ್ವದ ಅಧ್ಯಕ್ಷರಾದ ಡಾ.ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ʼಬಸವಾದಿ ಶರಣರು ನಡೆದಾಡಿದ ಕಲ್ಯಾಣದ ನೆಲದಲ್ಲಿ ಪ್ರತೀ ವರ್ಷ ಹೆಚ್ಚು ಕಲ್ಯಾಣ ಪರ್ವಗಳು ನಡೆಯಬೇಕು. ಕಲ್ಯಾಣದ ಕೀರ್ತಿ ವಿಶ್ವದಾದ್ಯಂತ ಬೆಳಗಬೇಕೆಂಬುದು ಲಿಂಗಾನಂದ ಸ್ವಾಮಿ, ಮಾತಾಜಿಯವರ ಸದಾಶಯವಾಗಿತ್ತು. ಇದೀಗ ಅವರ ನಿಜವಾರಸುದಾರರಾಗಿ ಸ್ವಾಭಿಮಾನಿ ಶರಣರು ಅವರ ಪರಂಪರೆ ಮುನ್ನಡೆಸಿಕೊಂಡು ಹೋಗುತಿದ್ದಾರೆ. ಇದು ಸೂರ್ಯ ಚಂದ್ರ ಇರುವವರೆಗೆ ಸಾಗಲಿದೆ. ಒಳಹೊರಗೆ ಶುದ್ಧವಾಗಿಟ್ಟುಕೊಂಡು ಪರ್ವಗಳು ನಡೆಸಬೇಕುʼ ಎಂದು ತಿಳಿಸಿದರು.

ಮಾತೆ ಸತ್ಯಾದೇವಿ ವಿರಚಿತ ʼವಚನ ಸಂಗಮʼ ಮತ್ತು ʼಯೋಗಾಂಗ ತ್ರಿವಿಧಿʼ ಕೃತಿಗಳನ್ನು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎಸ್.ನಾಗರಾಳೆ ಅವರು ಬಿಡುಗಡೆಗೊಳಿಸಿ ಮಾತನಾಡಿ, ʼಜಾಗತಿಕ ಸಮಸ್ಯೆಗಳಿಗೆ ಬಸವ ತತ್ವವೇ ಔಷಧಿಯಾಗಿದೆ. ವಿಶ್ವಶಾಂತಿಗಾಗಿ ವಚನ ಸಾಹಿತ್ಯಾಧ್ಯಯನ ಅತ್ಯವಶ್ಯಕʼ ಎಂದರು.

WhatsApp Image 2024 10 19 at 7.39.02 PM

ಹುಬ್ಬಳ್ಳಿ ಹೊಸಮಠದ ಡಾ. ಚಂದ್ರಶೇಖರ ಸ್ವಾಮೀಜಿ ಬಸವ ಧ್ಜಜಾರೋಹಣ ನೆರವೇರಿಸಿ ಮಾತನಾಡಿ, ʼ2025ರ ಮೇ ತಿಂಗಳಲ್ಲಿ ಲಂಡನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಬಸವ ತತ್ವ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸವ ಭಕ್ತರು ಪಾಲ್ಗೊಳ್ಳಬೇಕುʼ ಎಂದು ಕರೆ ನೀಡಿದರು.

ಚಿತ್ರದುರ್ಗದ ಕು.ತರಂಗಿಣಿ, ಕಲಬುರಗಿಯ ಕು.ಶ್ರೇಯಾ ಚೀಲಾ ಅವರ ವಚನ ನೃತ್ಯ ಸಭೀಕರ ಗಮನ ಸೆಳೆಯಿತು. ಮಂಡ್ಯ ಜಿಲ್ಲೆ ಮದ್ದೂರಿನ ಜನ್ಯ ಮ್ಯೂಜಿಕ್ ಅಕಾಡೆಮಿಯ ಹರ್ಷಿತಾ ಮತ್ತು ಶಿವು ಮದ್ದೂರ ಅವರ ಭಕ್ತಿ ಗೀತೆಗಳ ಗಾಯನ ನೆರೆದ ಭಕ್ತರ ಹುಬ್ಬೇರಿಸುವಂತೆ ಮಾಡಿತು.

ವಿಶೇಷ ಸತ್ಕಾರ: ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ಎಸ್.ಎಸ್.ನಾಗರಾಳೆ, ಬೆಂಗಳೂರಿನ ಶ್ರೀಶೈಲ ಮಸೂತಿ, ಕೊಪ್ಪಳದ ವೀರಣ್ಣ ಕೊರ್ಲಳ್ಳಿ, ನೃತ್ಯ ರತ್ನ ಪೂರ್ಣಚಂದ್ರ ಮೈನಾಳೆ, ಪ್ರೊ.ಎಸ್.ವಿ.ಕಲ್ಮಠ ಬೀದರ, ಪ್ರದೀಪ ಹೂಗಾರ ಸಿದ್ದೇಶ್ವರ ಅವರನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಸಮಾರಂಭದಲ್ಲಿ ಶಿವಮೊಗ್ಗ ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಬಾಣೂರು ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ಜಯಬಸವಾನಂದ ಸ್ವಾಮೀಜಿ ಚಿಕ್ಕಮಗಳೂರು, ಮಾತೆ ಶಾಂತಾದೇವಿ ಧಾರವಾಡ, ಶಂಕರಲಿಂಗ ಸ್ವಾಮೀಜಿ ಧುಮ್ಮನಸೂರು, ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ, ಬಸವಕಲ್ಯಾಣ ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಬಸವರಾಜ ಪಾಟೀಲ ಶಿವಪುರ, ಹುಬ್ಬಳ್ಳಿಯ ಸೂಫಿ ಸಂತರು, ಕೊಪ್ಪಳದ ವೀರಣ್ಣ ಕೊರ್ಲಳ್ಳಿ, ಕಲ್ಲಪ್ಪ ದೇಶಮುಖ, ಶಿವರಾಜ ಪಾಟೀಲ ಅತಿವಾಳ, ಬೆಂಗಳೂರಿನ ಶ್ರೀಶೈಲ ಮಸೂತಿ ಸೇರಿದಂತೆ ಮಹಾರಾಷ್ಟ್ರ ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಶರಣ ಶರಣೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...