ಚಿಂತಾಮಣಿ:ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದನ್ನು ಖಂಡಿಸಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆಬ್ರವರಿ 23 ರಂದು ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯ ಅಗಲಗುರ್ಕಿ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ, ಕೋಲಾರ ಬೆಂಗಳೂರು ಗ್ರಾಮಾಂತರ ಮೂರು ಜಿಲ್ಲೆಗಳನ್ನು ಒಳಗೊಂಡ ಬೃಹತ್ ಸಾರ್ವಜನಿಕ ಸಭೆಯಾಗಿದೆ ಮೂರು ಜಿಲ್ಲೆಗಳ ಎಲ್ಲ ತಾಲ್ಲೂಕುಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸುತ್ತಾರೆ. ಕೇಂದ್ರ ಸರ್ಕಾರವು ಇಡೀ ದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.2002 ರಲ್ಲಿದ್ದ ಮತದಾರರ ಪಟ್ಟಿಯ ಮ್ಯಾಪಿಂಗ್ ಮಡಲಿದ್ದು ಹೊಸದಾಗಿ ಸೇರ್ಪಡೆಯಾಗಿದ್ದವರನ್ನು ತೆಗೆದುಹಾಕಲಾಗುತ್ತಿದೆ.
ಹಿಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಬೂತ್ ಹಂತದ ಏಜೆಂಟರು ಎಚ್ಚೆತ್ತುಕೊಳ್ಳಬೇಕು ಅರ್ಹ ಮತದಾರರನ್ನು ಕೈಬಿಡದಂತೆ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ವಿಬಿ ರಾಮ್ ಜಿ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದರ ಜನವಿರೋಧಿ ನೀತಿಗಳ ಕುರಿತು ಜನಜಾಗೃತಿ ಮೂಡಿಸಬೇಕಾಗಿದೆ ಅನುದಾನವನ್ನು ಕಡಿತಗೊಳಿಸಲಾಗಿದೆ ವಿವಿಧ ನಿರ್ಭಂಧಗಳನ್ನು ಹೇರಲಾಗಿದೆ ರಾಜ್ಯ ಸರ್ಕಾರಗಳ ಮೇಲೆ ಹೊರೆ ಹಾಕುತ್ತಿದ್ದಾರೆ.
ಇದನ್ನು ಓದಿದ್ದೀರಾ…? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ
ಮನ್ರೇಗಾ ದಲ್ಲಿ ರಾಜ್ಯ ಸರ್ಕಾರದ ಪಾಲಿ ಶೇ.10, ಕೇಂದ್ರದ್ದು ಶೇ.90 ರಷ್ಟಿತ್ತು ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ರಾಜ್ಯಗಳ ಪಾಲು ಶೇ.40 ಕ್ಕೆ ಎರಿಕೆ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ ಎಂದರು.
ಕ್ಷೇತ್ರದ ಕಾಂಗ್ರೆಸ್ ನ ಎಲ್ಲಾ ಮುಖಂಡರುಕಾರ್ಯಕರ್ತರು ಭಾಗವಹಿಸಿದ್ದರು.





