ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !

Date:

ಬಾಗೇಪಲ್ಲಿ:ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.

ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪೆನುಮಲೆ ಗ್ರಾಮದ ನಿವಾಸಿ ಉದಯ್ ಕುಮಾರ್ (70) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ ಉದಯ್ ಕುಮಾರ್ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅಚೆಪಲ್ಲಿ ಗ್ರಾಮದ ಬಳಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕಾರಿನ ಒಳಗೇ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಪ್ರಾಥಮಿಕ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಹ ಚಾಲಕನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಇದನ್ನು ಓದಿದ್ದೀರಾ..?ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...