ರಾಯಚೂರು | ಜಿಲ್ಲೆಯ ಶಿಕ್ಷಕರ ಕೊರತೆ ನೀಗಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ

Date:

  • ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯ
  • ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಮನವಿ

ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆಯಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಕೂಡಲೇ ಶಿಕ್ಷಕರನ್ನು ನೇಮಿಸುವಂತೆ ಸಮಾನ ಶಾಲಾ ಶಿಕ್ಷಣ ಹೋರಾಟ ಸಮಿತಿ ಆಗ್ರಹಿಸಿದೆ.

ರಾಯಚೂರು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು, “ಶಿಕ್ಷಕರ ಕೊರತೆ ಹೆಚ್ಚಿದ್ದು ಕಾರಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಪ್ರಾಥಮಿಕ ಹಂತದಲ್ಲಿ ಮೂರು ಸಾವಿರ ಹಾಗೂ ಪ್ರೌಢಶಾಲೆ ಹಂತದಲ್ಲಿ ಐನೂರಕ್ಕಿಂತ ಹೆಚ್ಚು ಶಿಕ್ಷಕರ ಕೊರತೆಯಿತ್ತು. ಸದ್ಯ ವರ್ಗಾವಣೆಯ ನಂತರ ಈ ಸಂಖ್ಯೆಯ ಪ್ರಮಾಣ ಇನ್ನಷ್ಟು ಅಧಿಕವಾಗಿದೆ. ಇನ್ನು ಕೆಲವು ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದಾರೆ” ಎಂದು ಮಾಹಿತಿ ನೀಡಿದರು.

“ಪ್ರೌಢ ಶಾಲೆಯಲ್ಲಿ ಸುಮಾರು 900ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಾಗುವ ಸ್ಥಿತಿಯಲ್ಲಿದ್ದು, ತಕ್ಷಣ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರನ್ನು ನೇಮಿಸಿ ಪೂರಕ ವ್ಯವಸ್ಥೆ ಮಾಡಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವಂತೆ” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿಕೆಗಳು:

1. ಕಲ್ಯಾಣ ಕರ್ನಾಟಕದ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆ ಮಾಡುವುದು.

2. ಕಲ್ಯಾಣ ಕರ್ನಾಟಕದ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ಮಂಡಳಿ ಕರ್ನಾಟಕ ಮಂಡಳಿಯಿಂದ ಬೇರ್ಪಡಿಸಿ ನೇಮಕಾತಿ ಪರೀಕ್ಷಾ ಕೇಂದ್ರಗಳು ಸೇರಿದಂತೆ ಇತರೆ ನೇಮಕಾತಿಗೆ ಸಂಬಂಧಿಸಿದ ಪ್ರಾಧಿಕಾರ ಪ್ರತ್ಯೇಕವಾಗಿ ಸ್ಥಾಪನೆ ಮಾಡುವುದು.

3. ಈಗಾಗಲೇ ವರ್ಗಾವಣೆಯಾಗಿ ಬಂದಿರುವ ಶಿಕ್ಷಕರ ಸ್ಥಾನಗಳಿಗೆ ಅತಿಥಿ ಶಿಕ್ಷಕರನ್ನು ಶೀಘ್ರ ನೇಮಕ ಮಾಡಬೇಕು.

4) ಎಲ್ಲಾ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು.

5) ಈಗಾಗಲೇ ನೇಮಕಾತಿ ಹಂತದಲ್ಲಿರುವ ಶಿಕ್ಷಕರ ನೇಮಕಾತಿಯಲ್ಲಿ ನೇಮಕಗೊಂಡಿರುವ 13633 ಶಿಕ್ಷಕರನ್ನು ಶಾಲೆಗೆ ನಿಯುಕ್ತಗೊಳಿಸುವುದು ಹಾಗೂ ನೇಮಕಾತಿಗೆ ಸಂಬಂಧಿಸಿದ ನ್ಯಾಯಾಲಯಗಳ ಪ್ರಕ್ರಿಯೆ ಬಗೆಹರಿಸಿ ಆದೇಶ ಪ್ರತಿಯನ್ನು ನೀಡುವುದು.

ಈ ಸಂದರ್ಭದಲ್ಲಿ ಸಮಾನ ಶಾಲಾ ಶಿಕ್ಷಣ ಹೋರಾಟ ಸಮಿತಿಯ ಸಂಚಾಲಕರಾದ ಸಯ್ಯದ್ ಹಪೀಜುಲ್ಲಾ, ಅನಿಲ್ ಕುಮಾರ್ ತಾಯಪ್ಪ, ಮೋಕ್ಷಮ್ಮ, ಅಮರಮ್ಮ, ಶೋಭಾ, ಮಲ್ಲೇಶ್, ರಾಮಣ್ಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...