ತುಮಕೂರಿನಲ್ಲಿ ಅ. 18 ರಂದು ಸಮೀಕ್ಷೆ ಕುರಿತು ಜಾಗೃತ ಕರ್ನಾಟಕದಿಂದ ವಿಚಾರ ಗೋಷ್ಠಿ

Date:

ಸಮೀಕ್ಷೆ ನಂತರ ಮಾಹಿತಿ ಬಹಿರಂಗ ಪಡಿಸಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡಬೇಕಿದೆ. ಈ ಕಾರ್ಯಕ್ಕೆ ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಬೇಕಿದೆ.  ಈ ನಿಟ್ಟಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಅ. 18 ರಂದು ” ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ – 2025 : ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ?” ಎಂಬ ವಿಷಯ ಕುರಿತು ವಿಚಾರಗೋಷ್ಠಿ ಆಯೋಜಿಸಿದೆ ಎಂದು ಜಾಗೃತ ಕರ್ನಾಟಕದ ಸದಸ್ಯ ಕಿಶೋರ್ ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುಮಕೂರು ನಗರದ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ತಿನ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಜಾಗೃತ ಕರ್ನಾಟಕದ ಡಾ.ವಾಸು ಎಚ್. ವಿ ವಿಷಯ ಮಂಡಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ ಹಿಂದುಳಿದ ವರ್ಗಗಳ ಒಗ್ಗಟ್ಟು ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಹಿಂದುಳಿದ ವರ್ಗಗಳ ಸಮುದಾಯದ ವರು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು

ಸಾಮಾಜಿಕ ನ್ಯಾಯವನ್ನು ಒದಗಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದು ಅತ್ಯವಶ್ಯಕತೆ ಇದೆ. ಮೀಸಲಾತಿ ಫಲ ಅನುಭವಿಸಲು ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯ ಒಗ್ಗೂಡಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಿಕ್ಕುತಪ್ಪಿಸುವ ಹೇಳಿಕೆಗೆ ಮರಳಾಗಬಾರದು. ಸಮೀಕ್ಷೆ ಕುರಿತ ವಿಚಾರ ಸಂಕಿರಣದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಮೈಸೂರು ಅರಸರ ಕಾಲದಲ್ಲಿ ನಡೆದ ಸಮೀಕ್ಷೆಯಿಂದಲೂ ಇಲ್ಲಿಯವರೆಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಟ್ಟಭದ್ರರು ವಿರೋಧಿಸುತ್ತಲೇ ಬಂದಿದ್ದಾರೆ. ಸಂವಿಧಾನ ಬದ್ಧ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಸಮೀಕ್ಷೆ ಕಾರ್ಯ ಕೈಗೆತ್ತಿಕೊಂಡಿರುವುದು ಸ್ವಾಗತಾರ್ಹ ಎಂದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದುಳಿದ ವರ್ಗಗಳ ಒಗ್ಗೂಡುವ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿವೆ. ಸಮೀಕ್ಷೆಯಲ್ಲಿ ಭಾಗವಹಿಸಬೇಡಿ ಎಂದು ಹೇಳಿಕೆ ಕೊಡುತ್ತಾ ಅವರ ಸಮುದಾಯಕ್ಕೆ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದ ಪ್ರಹ್ಲಾದ್ ಜೋಷಿ ಮತಾಂತರಕ್ಕೆ ಈ ಸಮೀಕ್ಷೆ ಕಾರಣ ಎನ್ನುತ್ತಾರೆ. ಮರು ಪ್ರಶ್ನೆ ಮಾಡಿದರೆ ಸಮಂಜಸ ಉತ್ತರ ನೀಡಲಿಲ್ಲ. ಕೇಂದ್ರ ಸಚಿವ ತುಮಕೂರು ಸಂಸದ ಸೋಮಣ್ಣ ಅವರು ಘನತೆಗೆ ತಕ್ಕನಾಗಿ ಮಾತನಾಡದೆ ಮೇಲ್ಜಾತಿಗೆ ಮೋಸ ಆಗುತ್ತದೆ ಹಾಗೆಯೇ ತುಳಿಯಲ್ಪಟ್ಟಿದೆ ಎನ್ನುತ್ತಾರೆ. ಈ ಬಾಲಿಶ ಹೇಳಿಕೆಗಳು ಬಗ್ಗೆ ತಲೆ ಕೆಡಿಸಿಕೊಳ್ಳದೆ ಸಮೀಕ್ಷೆಯ ಅವಶ್ಯಕತೆ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಜಾಗೃತ ಕರ್ನಾಟಕ ಸದಸ್ಯ ಆದಂ ಖಾನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...