ಮಂಗಳೂರಿನ ಪಿಜಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Date:

ಮಂಗಳೂರು ನಗರದ ಕೊಡಿಯಾಲಬೈಲಿನ ಪಿಜಿಯೊಂದರಲ್ಲಿ ವಾಸವಿದ್ದ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೇರಳದ ಕೊಟ್ಟಾಯಂನ ಹನೀಫ್ ಖಾನ್ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಈತ ಕೊಡಿಯಾಲಬೈಲಿನ ಪಿಜಿ.ದರಲ್ಲಿ ವಾಸವಾಗಿದ್ದ. ಗುರುವಾರ ರಾತ್ರಿ ಊಟ ಮಾಡಲೆಂದು ಇತರ ವಿದ್ಯಾರ್ಥಿಗಳು ಕರೆದಾಗ ಒಳಗಿನಿಂದ ಯಾವುದೇ ಸ್ಪಂದನೆ ಬರದೇ ಇದ್ದ ಹಿನ್ನಲೆ ಪರಿಶೀಲಿಸಿದಾಗ, ಕಿಟಕಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡಿರುವ ದೃಶ್ಯ ಕಂಡು ಬಂದಿದೆ. ಕೈಯಲ್ಲಿ ಬೇಡಿನಿಂದ ಗೀರಿಕೊಂಡಿರುವ ಗಾಯಗಳೂ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು | ಜು.12ರಂದು ಲೋಕ ಅದಾಲತ್: ನ್ಯಾ. ಬಸವರಾಜ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹನೀಫ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಹಲವು ಸಮಯದಿಂದ ಮಾನಸಿಕವಾಗಿ ಒತ್ತಡಕ್ಕೊಳಗಾಗಿ ಈ ಹಿಂದೆಯೂ ಅನೇಕ ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ. ಹನೀಫ್ ಅವರ ತಂದೆಗೆ ಒಟ್ಟು ಮೂವರು ಮಕ್ಕಳು. ಅವಳಿ-ಜವಳಿ ಮಕ್ಕಳಲ್ಲಿ ಹನೀಫ್ ಒಬ್ಬನಾಗಿದ್ದು, ಇನ್ನೊಬ್ಬ ಕೊಟ್ಟಾಯಂನಲ್ಲಿ ಉದ್ಯೋಗದಲ್ಲಿದ್ದಾನೆ. ಇವರ ಅಣ್ಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬಳಿಕ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಕೊಟ್ಟಾಯಂಗೆ ಕೊಂಡೊಯ್ಯಲಾಗಿದೆ. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...