ಬೀದರ್‌ | ಅನುದಾನಿತ ಶಾಲೆ ವಿದ್ಯಾರ್ಥಿನಿ ಸಹನಾ ತಾಲೂಕಿಗೆ ಪ್ರಥಮ

Date:

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್‌ 34ನೇ ಸ್ಥಾನದಲ್ಲಿದ್ದರೂ ಇಲ್ಲಿನ ಗ್ರಾಮೀಣ ಭಾಗದ ಕೆಲ ವಿದ್ಯಾರ್ಥಿಗಳು ಗಣನೀಯ ಸಾಧನೆಗೈಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ ಬೀದರ್‌ ತಾಲೂಕು ಶೇ 66.88 ರಷ್ಟು ಫಲಿತಾಂಶ ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಔರಾದ ತಾಲೂಕು ಶೇ 55.78 ರಷ್ಟು ಫಲಿತಾಂಶ ಬಂದಿದ್ದು, ಕೊನೆ ಸ್ಥಾನದಲ್ಲಿದೆ. ಔರಾದ ತಾಲೂಕಿನ ಸರ್ಕಾರಿ ಶಾಲೆಯ ಫಲಿತಾಂಶ ಶೇ 55.75, ಅನುದಾನಿತ ಶಾಲೆ ಶೇ 39.33 ಹಾಗೂ ಖಾಸಗಿ ಶಾಲೆ ಶೇ 89.46 ಫಲಿತಾಂಶ ಬಂದಿದೆ.

ಅನುದಾನಿತ ಶಾಲೆಯ ಫಲಿತಾಂಶದಲ್ಲಿ ತೀರಾ ಕುಸಿತ ಕಂಡರೂ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಅನುದಾನಿತ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜಪ್ಪಾ 625ಕ್ಕೆ 618 (ಶೇ99.88) ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿದ್ದಾಳೆ. ಅಲ್ಲದೇ ಜಿಲ್ಲೆಗೆ ನಾಲ್ಕನೇ ಹಾಗೂ ರಾಜ್ಯಕ್ಕೆ ಎಂಟನೇ ರ್‍ಯಾಂಕ್‌ ಗಳಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಭಾಗದ ರೈತ ಕುಟುಂಬದ ವಿದ್ಯಾರ್ಥಿನಿ ಸಹನಾ ರಾಜಪ್ಪಾ ಪ್ರಾರಂಭದಿಂದಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಳು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ 125ಕ್ಕೆ 125 ಅಂಕ, ಹಿಂದಿ 100, ಗಣಿತ 100 ಹಾಗೂ ವಿಜ್ಞಾನ 99 ಅಂಕ ಗಳಿಸಿದ್ದಾರೆ.

“ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿ ಟಾಪರ್‌ ಬರೆಬೇಕೆಂದು ಮನೆಯಲ್ಲಿ ಯಾವುದೇ ಒತ್ತಡ ಇರಲಿಲ್ಲ. ಪೋಷಕರ ಪ್ರೋತ್ಸಾಹ ಹಾಗೂ ಶಾಲೆಯಲ್ಲಿ ಶಿಕ್ಷಕರ ಗುಣಮಟ್ಟ ಬೋಧನೆಯಿಂದ ಇಷ್ಟು ಅಂಕ ಗಳಿಸಲು ಸಾಧ್ಯವಾಗಿದೆ. ಮುಂದೆ ಪಿಯುಸಿ ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಳ್ಳುವೆ. ಬದುಕಿನಲ್ಲಿ ಐಎಎಸ್‌ ಅಧಿಕಾರಿ ಆಗುವ ಗುರಿಯಿದೆ” ಎಂದು ವಿದ್ಯಾರ್ಥಿನಿ ಸಹನಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕ ಪ್ರಜ್ಞೆ ವಿಸ್ತರಿಕೊಳ್ಳಲು ವಚನಗಳ ಅನುಸಂಧಾನ ಅಗತ್ಯ : ಡಾ. ಭೀಮಶಂಕರ ಬಿರಾದರ

ವಿದ್ಯಾರ್ಥಿನಿ ಸಾಧನೆಗೆ ಸುಭಾಷ್ ಚಂದ್ರ ಬೋಸ್ ಪ್ರೌಢ ಶಾಲೆಯ ಅಧ್ಯಕ್ಷ ಶಿವಾಜಿರಾವ್ ಬೋರಳೆ, ಕಾರ್ಯದರ್ಶಿ ನಂದಾದೀಪ ಬೋರಳೆ, ಮುಖ್ಯಗುರು ಮನೋಹರ ಬಿರಾದಾರ ಸೇರಿದಂತೆ ಶಾಲಾ ಸಿಬ್ಬಂದಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...