ಸಾಗರ | ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ದಿಢೀರ್ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು

Date:

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕಾಲೇಜೊಂದರ ಬಳಿ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಯಾರಿಗೂ ಏನು ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ದಳ ಸ್ಟಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಹೊನ್ನಾವರದಿಂದ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆಗೆ ಸೇರಿದ್ದ ಈ ಬಸ್‌, ಮಾಗುಂಡಿ ಸಮೀಪ ಬರುತ್ತಿರುವಾಗಲೇ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೂ ಚಾಲಕ ಬಸ್‌ನ್ನು ಚಾಲನೆ ಮಾಡಿಕೊಂಡು ಬಂದಿದ್ದಾನೆ. ಆದರೆ, ಸಾಗರ ನಗರದ ಮುಖ್ಯರಸ್ತೆಯಲ್ಲಿ ಬರುತ್ತಿರುವಾಗ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಬಸ್‌ ನಿಲ್ಲಿಸಿದ್ದರಿಂದ ಯಾವುದೇ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...