ಬೀದರ್‌ | ಭೀಕರ‌ ರಸ್ತೆ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು

Date:

ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.

ಬೀದರ್‌ – ಭಾಲ್ಕಿ ಹೆದ್ದಾರಿಯ ಸೇವಾನಗರ ತಾಂಡಾ ಬಳಿ ಬುಧವಾರ ಬೆಳಗ್ಗೆ ನಡೆದ ದುರ್ಘಟನೆಯಲ್ಲಿ ಮಹಾರಾಷ್ಟ್ರದ ಉದಗೀರ್‌ ಮೂಲದವರಾದ ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಟಾಟಾ ಏಸ್ ವಾಹನದಲ್ಲಿ ಒಟ್ಟು 14 ಜನ ಪ್ರಯಾಣಿಸುತ್ತಿದ್ದರು. ಉದಗೀರ್‌ದಿಂದ ಹೈದರಾಬಾದ್ ಕಡೆಗೆ ತೆರಳುವ ವೇಳೆ ಬೀದರ್‌ನಿಂದ ಭಾಲ್ಕಿಗೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು, ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ರೈತರಿಗೆ ಶ್ರದ್ಧಾಂಜಲಿ

ಈ ಕುರಿತು ಭಾಲ್ಕಿ ತಾಲೂಕಿನ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್‌ಪಿ ಚನ್ನಬಸವಣ್ಣ ಲಂಗೋಟಿ ನೇತ್ರತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...