ಇಷ್ಟು ದೊಡ್ಡ ಪ್ರಮಾಣದಲ್ಲಿ ರೈಲು ದುರಂತ ಹಿಂದೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

Date:

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತ ಗಮನಿಸಿದರೆ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದಲ್ಲಿ ರೈಲು ದುರಂತ ನಡೆದಿಲ್ಲ. ಈ ಘಟನೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಶನಿವಾರ ಮಾತನಾಡಿದ ಅವರು, ಬೆಂಗಳೂರಿನಿಂದ ಪಶ್ಚಿಮ ಬಂಗಾಳದ ಹೌರಾಕ್ಕೆ ಹೋಗುತ್ತಿದ್ದ ರೈಲು ಒಡಿಶಾದಲ್ಲಿ ಅಪಘಾತಕ್ಕೆ ಒಳಗಾಗಿದೆ. ಸೂಕ್ತ ತನಿಖೆ ನಡೆಸಿ, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ. ಈಗಾಗಲೇ ಅವರು ಘಟನಾ ಸ್ಥಳಕ್ಕೆ ವಿಮಾನದಲ್ಲಿ ಹೋಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆಯಲ್ಲಿ ರಾಜ್ಯದ ಪ್ರಯಾಣಿಕರು ಗಾಯಗೊಂಡ ಅಥವಾ ಪ್ರಾಣಹಾನಿ ಬಗ್ಗೆ ಯಾವುದೇ ಮಾಹಿತಿ ಸದ್ಯ ಸಿಕ್ಕಿಲ್ಲ. ಈ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಮುಖ್ಯಕಾರ್ಯದರ್ಶಿ ಅವರಿಗೂ ಸೂಚಿಸಿದ್ದೇನೆ. ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...