ಬೀದರ್‌ | ಮಹಿಳೆ ಅಬಲೆಯಲ್ಲ ಸಬಲೆ : ಭಾರತಿ ವಸ್ತ್ರದ್

Date:

ಮಹಿಳೆಯರು ಅಬಲೆಯರಲ್ಲ ಸಬಲೆಯರು, ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಭಾರತಿ ವಸ್ತ್ರದ್‌ ಅಭಿಪ್ರಾಯಪಟ್ಟರು.

ಬೀದರ್ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಹಿಳೆಯರಿಗೆ ಅನೇಕ ಸಂವಿಧಾನಾತ್ಮಕ ಸೌಲಭ್ಯಗಳಿವೆ, ಅವುಗಳು ಸದುಪಯೋಗ ಪಡೆದು ಗುರಿ ತಲುಪಬೇಕು” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಲಬುರಗಿ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಮಾತನಾಡಿ, “ಇಂದಿನ ಯುವತಿಯರ ಮೇಲೆ ಗುರುತರ ಜವಾಬ್ದಾರಿ ಇದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಸ್ತ್ರೀಯರಿಗೆ ಅಷ್ಟೊಂದು ಅವಕಾಶಗಳು ಇರಲಿಲ್ಲ. ನಿಮ್ಮ ಮುಂದೆ ಅನೇಕ ಮಹಿಳಾ ಸಾಧಕಿಯರ ದೊಡ್ಡ ಪಟ್ಟಿಯೇ ಇದೆ. ಬದುಕಿನಲ್ಲಿ ಅನೇಕ ಕಷ್ಟ ನಷ್ಟಗಳು ಎದುರಾಗುತ್ತವೆ. ಆದರೆ, ಎದುರಾಗುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಗುರಿ ಸಾಧಿಸಬೇಕು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಯಶ್ರೀ ಪ್ರಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಮಹಿಳೆಯರು ಕೌಟುಂಬಿಕ ಜವಾಬ್ದಾರಿಯೊಂದಿಗೆ ಸಾಮಾಜಿಕ ರಂಗಗಳಲ್ಲಿಯೂ ಛಾಪು ಮೂಡಿಸಿದ್ದಾರೆ. ಹೆಣ್ಣು ಬರೀ ಅಲಂಕಾರಿಕ, ಭೋಗದ ವಸ್ತುವಲ್ಲ, ಅವಳಿಗೂ ಪುರುಷರ ಸರಿಸಮ ನಿಲ್ಲುವ ಎಲ್ಲ ಶಕ್ತಿ, ಸಾಮರ್ಥ್ಯಗಳಿವೆ, ಸಾಧನೆಗೆ ಕೊನೆ ಇಲ್ಲ. ಆದರೆ, ಈ ಶರೀರಕ್ಕೆ ಕೊನೆಯಿದೆ” ಎಂದರು,

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿರ್ಮಲಾ ಸೀತಾರಾಮನ್‌ ಮುಕ್ತಮನಸ್ಸಿನಿಂದ ಚರ್ಚೆಯಲ್ಲಿ ಭಾಗವಹಿಸುವರೇ ?

ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ. ಶೀಲಾ ಎನ್. ಎಸ್., ಅರ್ಜುಮಂದ ಅಜರ, ಡಾ. ರಾಜಕುಮಾರ ಆಲ್ಲೂರೆ, ಡಾ.ಸುಚಿತಾನಂದ ಮಲ್ಕಾಪೂರೆ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಮಹಾದೇವಿ ಹೆಬ್ಬಾಳೆ ಕಾರ್ಯಕ್ರಮ ನಿರೂಪಿಸಿದರು, ಪಾಳೇದ ಮಹೇಶ್ವರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...