ಕಲಬುರಗಿ| ಸಾಲಬಾಧೆ : ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ

Date:

ಸಾಲಬಾಧೆಯಿಂದ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ.

ಭೀಮರಾವ್ ಪ್ರಭು ಸಲಗರ್ (29) ಮೃತ ರೈತ. ಮೃತರಿಗೆ 8 ಎಕರೆ ಜಮೀನು ಇದೆ. ತಂದೆ, ತಾಯಿ, ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಗ್ರಾಮದ ಕೆಜಿಬಿ ಬ್ಯಾಂಕಿನಲ್ಲಿ 3 ಲಕ್ಷ ಸಾಲ ಹಾಗೂ ಖಾಸಗಿ ಬಳಿ ಕೃಷಿ ಚಟುವಟಿಕೆ, ಕುಟುಂಬ ನಿರ್ವಹಣೆಗೆ 7 ಲಕ್ಷ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.

ಪ್ರಸಕ್ತ ವರ್ಷ ಹೊಲದಲ್ಲಿ ನಿರೀಕ್ಷೆಯಂತೆ ಆದಾಯ ಆಗದ ಕಾರಣದಿಂದ ಜಿಗುಪ್ಸೆ ಹೊಂದಿ ಮನೆಯಲ್ಲಿ ವಿಷ ಸೇವಿಸಿದ್ದರು, ಕೂಡಲೇ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ. ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಎಂಎವೈ-ಜಿ : ಜಿಲ್ಲೆಗೆ 15 ಸಾವಿರ ಮನೆ ಮಂಜೂರು : ಸಂಸದ ಸಾಗರ ಖಂಡ್ರೆ

ಪರಿಹಾರಕ್ಕೆ ಒತ್ತಾಯ : ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳವಳಕಾರಿಯಾಗಿದೆ. ಇದೀಗ ಕುಟುಂಬ ಸಂಕಷ್ಟದಲ್ಲಿದೆ. ಮೃತ ರೈತನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...