ಬೀದರ್‌ | ಶಾಸಕರಿಂದ ದಲಿತ ಅಧಿಕಾರಿಗೆ ನಿಂದನೆ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

Date:

ದಲಿತರಿಗೆ ಮತ್ತು ದಲಿತ ಅಧಿಕಾರಿಗಳಿಗೆ ಆವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಮಾನಸಿಕ ಚಿತ್ರಹಿಂಸೆ ನೀಡುತ್ತಿರುವ ಹುಮನಾಬಾದ ಶಾಸಕ ಸಿದ್ದಲಿಂಗಪ್ಪಾ ಪಾಟೀಲ ಅವರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಹುಮನಾಬಾದನಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಸಾಂಕೇತಿಕ ಧರಣಿ ನಡೆಸಿತು.

ಪಟ್ಟಣದ ಡಾ. ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಪ್ರಮುಖರು ಶಾಸಕರ ವಿರುದ್ಧ ಘೋಷಣೆ ಕೂಗಿ ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಹುಮನಾಬಾದ ಶಾಸಕ ಸಿದ್ದಲಿಂಗಪ್ಪಾ ಪಾಟೀಲರವರು ಶಾಸಕರಾಗಿ ಕೇವಲ ಆರು ತಿಂಗಳು ಕಳೆದಿದೆ. ಆದರೆ ಕೆಲವು ತಿಂಗಳುಗಳಿಂದ ಅತ್ಯಂತ ದರ್ಪದಿಂದ ವರ್ತಿಸುತ್ತಿದ್ದು, ಅವರ ಕಣ್ಣಿಗೆ ಯಾರೂ ಗೋಚರಿಸುತ್ತಿಲ್ಲ. ಕ್ಷೇತ್ರದ ದಲಿತರಿಗೆ ಮತ್ತು ದಲಿತ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವದಲ್ಲದೇ, ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ” ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ.22 ರಂದು ಹುಮನಾಬಾದ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ. ಸಭೆಯಲ್ಲಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೋವಿಂದರ ಜೊತೆ ಸೌಜನ್ಯದಿಂದ ವರ್ತಿಸದೇ ದಲಿತ ಅಧಿಕಾರಿಯೆಂಬ ಅಸ್ಪ್ರಶ್ಯ ಮನೋಭಾವನೆಯಿಂದ ನೀನೊಬ್ಬ ನಾಲಾಯಕ್ ಅಧಿಕಾರಿ, ಕಮಿಷನ್ ಏಜೆಂಟ್ ಮತ್ತು ಕಾಂಗ್ರೆಸ್ ಏಜೆಂಟ್ ಎಂದು ದಲಿತ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದಾರೆ” ಎಂದು ದೂರಿದರು.

ಇದರಿಂದ ತಾಲೂಕಿನ ಇತರೆ ಇಲಾಖೆ ಅಧಿಕಾರಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ದಲಿತ ನೌಕರರ ಮೇಲೆ ತಮಗೆ ಅಷ್ಟೊಂದು ಹೀನ ಮನಸ್ಥಿತಿವಿದ್ದರೆ ತಾಲೂಕಿನ ಎಲ್ಲಾ ದಲಿತ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ನಿಮ್ಮ ಮನಸ್ಥಿತಿಯನ್ನು ಸಂತೈಸಿಕೊಳ್ಳಿ ಎಂದು ಖಂಡಿಸಿ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗಡಿ ಭಾಗದ ಕಮಲನಗರ ತಾಲೂಕು ಕೆಂದ್ರದಲ್ಲೇ ಇಲ್ಲ ʼಸರ್ಕಾರಿ ಪ್ರೌಢ ಶಾಲೆʼ

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಲಕ್ಷ್ಮಣರಾವ ಬುಳ್ಳಾ, ಡಾ. ಅರುಣಕುಮಾರ್‌ ಕುರ್ನೆ, ನೀಲಕಂಠ ಶಟ್ಟಿ, ಕೈಲಾಸ ಮೇಟಿ, ರಮೇಶ ಡಾಕುಳಗಿ, ಶಾಂತಕುಮಾರ ಅರಳಿ, ಶರಣಪ್ಪಾ ಮೇತ್ರೆ, ಅಮರ ಉತ್ತಮ, ವೀರಪ್ಪ ಧುಮನಸೂರ, ಸುಧಾಕರ ಮಾಡಗೂಳ, ರಾಜೇಂದ್ರ ದಾಂಡೇಕರ್‌, ಮಲ್ಲಿಕಾರ್ಜುನ ಶರ್ಮಾ, ಪ್ರಕಾಶ ಕಾಡಗೂಂಡ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...