ಬೆಂ-ಮೈ ಎಕ್ಸ್‌ಪ್ರೆಸ್‌ನಲ್ಲಿ ಅಪಘಾತ; ಬಸ್‌ ನಿರ್ವಾಹಕ ಸಾವು

Date:

ಕೆಎಸ್‌ಆರ್‌ಟಿಸಿ ವಿದ್ಯುತ್‌ಚಾಲಿತ ಬಸ್‌ ಮತ್ತು ಸರಕು ಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ ನಿವಾರ್ಹಕ ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಗುರುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌, ರಾಮಗನರದ ಜಯಪುರ ಬಳಿ ಎದುರುಗಡೆ ಹೋಗುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್‌ನ ಮುಂದಿನ ಸೀಟ್‌ನಲ್ಲಿ ಕುಳಿತಿದ್ದ ನಿರ್ವಾಹಕ ಸಾವನ್ನಪ್ಪಿದ್ದಾರೆ.

ಸರಕು ಸಾಗಣೆ ವಾಹನದಲ್ಲಿದ್ದ ಶೀಟ್‌ಗಳು ಬಸ್‌ ಮುಂಭಾಗಕ್ಕೆ ನುಗ್ಗಿವೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌, ರಸ್ತೆದಾಟಿ, ಪಕ್ಕದ ಜಮೀನಿಗೆ ಇಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ರಸ್ತೆಯ ಪರಿಶೀಲನೆ ನಡೆಸಿದ್ದು, ರಸ್ತೆ ಸುರಕ್ಷತಾ ಆಡಿಟ್‌ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಡಿಜಿಪಿ ಅಲೋಕ್‌ ಕುಮಾರ್‌ ಕೂಡ ರಸ್ತೆ ಪರಿಶೀಲನೆ ನಡೆಸಿದ್ದು, ಪೊಲೀಸರು ಹೆದ್ದಾರಿಗಳಲ್ಲಿ ಸಮವಸ್ತ್ರದೊಂದಿಗೆ ಕಾಣಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಳೆದ ಐದು ತಿಂಗಳಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...