ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ; ಮೂವರು ಸಾವು

Date:

ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಮತ್ತು ಮತ್ತೊಂದು ವಾಹನದ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ನೀರಜ್ ಕುಮಾರ್ (50), ಅವರ ಪತ್ನಿ ಸೆಲ್ವಿ (47) ಹಾಗೂ ಮಂಡ್ಯದ ಚಾಲಕ ನಿರಂಜನ್ (35) ಎಂದು ಗುರುತಿಸಲಾಗಿದೆ.

ನೀರಜ್ ಮತ್ತು ಅವರ ಪತ್ನಿ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಮೈಸೂರಿನಿಂದ ಬರುತ್ತಿದ್ದ ಮತ್ತೊಂದು ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆಗರಿ ಬಂದು ಕಾರಿಗೆ ಡಿಕ್ಕಿಹೊಡೆದಿದೆ. ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದಲೇ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...