ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಅಪಘಾತ; ಓರ್ವ ಸಾವು

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ ಆರಂಭವಾದ ಬಳಿಕ ಸಾಲು-ಸಾಲು ಅಪಘಾತಗಳು ಸಂಭವಿಸುತ್ತಿವೆ. ಗುರುವಾರವೂ ಕೂಡ ರಾಮನಗರ ಬಳಿ ಅಪಘಾತ ಸಂಭವಿಸಿದ್ದು, ಆರ್‌ಬಿಐ ನೌಕರರೊಬ್ಬರು ಮೃತಪಟ್ಟಿದ್ದಾರೆ.

ರಾಮನಗರದ ಹೊರವಲಯದ ಡಿಬಿಎಲ್ ಕಚೇರಿಯ ಬಳಿ ಹಾದುಹೋಗಿರುವ ಎಕ್ಸ್‌ಪ್ರೆಸ್‌-ವೇನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಾವನ್ನಪ್ಪಿದವರನ್ನು ಆರ್‌ಬಿಐ ನೌಕರ ಜಗದೀಶ್ (48) ಎಂದು ಗುರುತಿಸಲಾಗಿದೆ.

ಜಗದೀಶ್‌ ಅವರು ಮೈಸೂರಿನ ಆರ್‌ಬಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಕುಟುಂಬಸ್ಥರೊಂದಿಗೆ ಗುರುವಾರ ಸಂಜೆ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆ ಬದಿಯಲ್ಲಿ ಹಾಕಿದ್ದ ಕಬ್ಬಿಣದ ಬೇಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು, ಪಕ್ಕದ ಸರ್ವೀಸ್ ರಸ್ತೆಗೆ ಉರುಳಿದೆ. ಪರಿಣಾಮ ಜಗದೀಶ್‌ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಗದೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಪತ್ನಿ ನಂದಿತಾ ಮತ್ತು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ ಐದು ತಿಂಗಳಿನಲ್ಲಿ 570 ಅಪಘಾತಗಳು ಸಂಭವಿಸಿವೆ. 55 ಮಂದಿ ಸಾವನ್ನಪ್ಪಿದ್ದಾರೆ. 279 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 184 ಮಂದಿಗೆ ಮೂಳೆ ಮುರಿತದಂತಹ ಸಮಸ್ಯೆಗಳಿಗೆ ಒಳಗಾಗಿದ್ದಾರೆ. 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...