ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ಅಪಘಾತ; ಬೀದರ್​ ಜಿಲ್ಲೆಯ 6 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

Date:

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೀದರ್​ ಜಿಲ್ಲೆಯ 6 ಮಂದಿಯ ಮೃತದೇಹಗಳನ್ನು ಸೋಮವಾರ ಸ್ವಗ್ರಾಮಕ್ಕೆ ತಂದಿದ್ದು, ಸಾಮೂಹಿಕ ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಮೂರು ಫ್ರೀಜ಼ರ್ ಆ್ಯಂಬುಲೆನ್ಸ್‌ ಮೂಲಕ ಲಾಡಗೇರಿ ಗ್ರಾಮಕ್ಕೆ ಮೃತದೇಹಗಳನ್ನು ತರಲಾಯಿತು. ಶವಗ‌ಳು ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸುಲೋಚನಾ, ಲಕ್ಷ್ಮಿ, ನೀಲಮ್ಮ, ಸಂತೋಷಕುಮಾರ್, ಸುನೀತಾ, ಕಲಾವತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದು, ಇವರೆಲ್ಲರೂ ಸೋದರ ಸಂಬಂಧಿಕರು ಎಂದು ತಿಳಿದುಬಂದಿದೆ.

ವಾರಾಣಸಿಯಿಂದ ಆ್ಯಂಬುಲೆನ್ಸ್‌ ಮೂಲಕ ತರಲಾದ ಮೃತದೇಹಗಳನ್ನು ಗುಮ್ಮೆ ಲೇಔಟ್​ನಲ್ಲಿರುವ ರುದ್ರಭೂಮಿಯಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ 21ರಂದು ಕಾಶಿ ಬಳಿಯ ರೂಪಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದರೆ, 7 ಮಂದಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಫೆಬ್ರವರಿ 23ರಂದು ಮತ್ತೊಬ್ಬರು ಕೊನೆಯುಸಿರೆಳೆದಿದ್ದರು.‌

ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | 15ನೇ ಮೈಲಿಗಲ್ಲು ಬಳಿ ಅಪಘಾತ; ಯುವಕರ ಕಾಲು ಮುರಿತ

ಲಾರಿಗೆ ಹಿಂಬದಿಯಿಂದ ರಭಸವಾಗಿ ಕ್ರೂಸರ್ ಡಿಕ್ಕಿಯಾದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಭಾನುವಾರ ಓರ್ವ ಗಾಯಾಳು ಮೃತಪಟ್ಟಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿತ್ತು. ಇನ್ನುಳಿದ 6 ಜನರಿಗೆ ಚಿಕಿತ್ಸೆ ಮುಂದುವರಿದಿದೆ.

“ಬೀದರ್​ ಜಿಲ್ಲಾಡಳಿತ ಮೃತದೇಹಗಳನ್ನು ತರಲು ಸಾಕಷ್ಟು ಶ್ರಮಿಸಿದೆ. ಕುಂಭಮೇಳಕ್ಕೆ ತೆರಳಿದಾಗ ನಮ್ಮ ಜಿಲ್ಲೆಯಿಂದಲೇ ನಡೆದ ಎರಡನೇ ಅಪಘಾತ ಪ್ರಕರಣ ಇದಾಗಿದೆ. ಮೃತರೆಲ್ಲರೂ ಬಡ ಕುಟುಂಬಗಳಿಗೆ ಸೇರಿದವರು. ಅವರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರವನ್ನು ಕೊಡಬೇಕು. ಅವರ ಮಕ್ಕಳು ಅನಾಥರಾಗಿದ್ದು, ಅವರನ್ನು ನೋಡಿದರೆ ಕರಳು ಕಿತ್ತುಬರುತ್ತದೆ. ಗಾಯಗೊಂಡವರು ಜಿಲ್ಲಾಸ್ಪತ್ರೆಗೆ ಬಂದು ದಾಖಲಾಗುತ್ತಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು” ಎಂದು ಕೋಲಿ ಸಮಾಜದ ಮುಖಂಡ ಜಗನ್ನಾಥ್​ ಜಮಾದಾರ್ ಸರ್ಕಾರಕ್ಕೆ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...