ಬೀದರ್‌ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ

Date:

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾ‌ರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ ದೇವಿದಾಸ ರಾಠೋಡ್ (60) ಎಂಬಾತ ಆರೋಪಿಯನ್ನು ಮಹಾರಾಷ್ಟ್ರದ ಮರಖೇಲ್ ವ್ಯಾಪ್ತಿಯ ಲೋಣಿ ತಾಂಡಾದಲ್ಲಿ ಅಲ್ಲಿನ ಮುಖ್ಯ ಪೇದೆ ದೀಪಕ ನೆರವಿನಿಂದ ಬಂಧಿಸಲಾಗಿದೆ.

1993ರ ನವೆಂಬರ್‌ 13 ರಂದು ಠಾಣಾಕುಶನೂರ ಠಾಣೆಯ ಅಂದಿನ ಪಿಎಸ್‌ಐ ಅಯ್ಯಂಗಾರ್ ಮೇಲೆ  ಡಕಾಯಿತರ ಗುಂಪೊಂದು ಆಯುಧಗಳಿಂದ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ದರೋಡೆಗಾಗಿ 129 ಜನ ಅಕ್ರಮ ಕೂಟ ರಚಿಸಿಕೊಂಡು ಕಂಟ್ರಿ ಪಿಸ್ತೂಲ್ ಇತರ ಮಾರಕಾಸ್ತ್ರಗಳೊಂದಿಗೆ ಭವಾನಿ ಬಿಜಲಗಾಂವ್ ಮತ್ತು ಅಕ್ಕಪಕ್ಕದ ಗ್ರಾಮಗಳಿಗೆ ಹೋಗುತ್ತಿರುವ ಮಾಹಿತಿ ಆಧರಿಸಿ ಪಿಎಸ್‌ಐ ಅಯ್ಯಂಗಾರ್ ಮತ್ತು ಸಿಬ್ಬಂದಿ ತಡೆಯಲು ಹೋದಾಗ ಹಲ್ಲೆ ಮಾಡಿದ್ದು, 127 ಜನರ ವಿರುದ್ಧ ಠಾಣಾಕುಶನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ತಲೆಮರೆಸಿಕೊಂಡಿದ್ದರಿಂದ ಪ್ರಕರಣ ಎಲ್‌ಪಿಆ‌ರ್ ನಲ್ಲಿತ್ತು.‌ ಅದರಲ್ಲಿ ದೇವಿದಾಸ ರಾಠೋಡ್ ಕೂಡ ಒಬ್ಬನಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಘೋರ ಅಪರಾಧ ಆರೋಪಿತನ ಪತ್ತೆ ಹಚ್ಚಿ ಬಂಧನಕ್ಕೆ ಕಳುಹಿಸಿದ ಭಾಲ್ಕಿ ಡಿವೈಎಸ್‌ ಪಿ ಶಿವಾನಂದ ಪವಾಡಶೆಟ್ಟಿ, ಕಮಲನಗರ ಸಿಪಿಐ ರಾಮಪ್ಪಾ ಸಾವಳಗಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಠಾಣಾಕುಶನೂರು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್.ಪಿ. ಚನ್ನಬಸವಣ್ಣ ಲಂಗೋಟಿ ಪ್ರಶಂಸನಾ ಪತ್ರದೊಂದಿಗೆ ಬಹುಮಾನ ನೀಡಿ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ಈ ಸಂದರ್ಭದಲ್ಲಿ ಠಾಣಾಕುಶನೂರು ಠಾಣೆ ಪಿ.ಎಸ್.ಐ ಉದ್ದಂಡಪ್ಪಾ, ಎಎಸ್‌ಐ ಅನಿಲಕುಮಾರ ಹಾಗೂ ಸಿಬ್ಬಂದಿಗಳಾದ ಸಂಗಮೇಶ್, ಸಂಜೀವಕುಮಾರ, ಬಾಲಾಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...