ಉಚಿತ ಪ್ರಯಾಣ | ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

Date:

  • ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಸರ್ಕಾರದಿಂದ ವೆಚ್ಚ ಸಂದಾಯ
  • ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವ ಪ್ರಕ್ರಿಯೆಗೆ ಮೂರು ತಿಂಗಳ ಗಡುವು

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕ.ರಾ.ರ.ಸಾ ನಿಗಮ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಜೂನ್‌ 11ರಿಂದ ಕೆಲವು ಷರತ್ತುಗಳೊಂದಿಗೆ ಪ್ರಯಾಣಿಸಬಹುದು ಎಂದು ಆಡಳಿತಾತ್ಮಕ ಅನುಮೋದನೆ ನೀಡಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ ಎಸ್ ಆದೇಶ ಹೊರಡಿಸಿದ್ದಾರೆ.

ಉಚಿತ ಪ್ರಯಾಣ

ಸಾರಿಗೆ ಇಲಾಖೆಯ ಷರತ್ತುಗಳು

  • ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸುತ್ತದೆ.
  • ಸಾರಿಗೆ ಸಂಸ್ಥೆಯ ಐಷಾರಾಮಿ ಬಸ್‍ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್(ಎಸಿ ಬಸ್‌ಗಳು) ಬಸ್‍ಗಳಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ.
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಸಾರ್ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಬಸ್‍ಗಳಲ್ಲಿ(ಎಸಿ, ಐಷರಾಮಿ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
  • ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.
  • ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
  • ಶಕ್ತಿ ಸ್ಮಾರ್ಟ್ ಕಾರ್ಡ್‍ನ್ನು ವಿತರಿಸುವವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಇಲಾಖೆ, ಸರಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...