ಶಿವಮೊಗ್ಗ | ‘ಚಕ್ರಾ–ಸಾವೇಹಕ್ಲು’ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ನೀಡಿ: ಹೋರಾಟಗಾರರ ಆಗ್ರಹ

Date:

ಚಕ್ರಾ–ಸಾವೇಹಕ್ಲು ಮುಳುಗಡೆಯ ಮೂಲ ಸಂತ್ರಸ್ತರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ರೈತರೊಂದಿಗೆ ಶೀಘ್ರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸೋಶಿಯಲ್‌ ಜಸ್ಟಿಸ್‌ ಪಬ್ಲಿಕ್‌ ಪ್ರಾಬ್ಲಮ್‌ ಸಂಘಟನೆಯ ಪ್ರಮುಖ ರಿಯಾಜ್‌ ಅಹ್ಮದ್‌ ಹೇಳಿದರು.

ನೈಜ ಸಂತ್ರಸ್ತರಿಗೆ ಪುನರ್‌ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಮುಂದಾಗುತ್ತಿಲ್ಲ. ಇದರಿಂದಾಗಿ ರೈತರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ದೂರಿದರು.

ದಾಖಲೆಗಳನ್ನು ಪರಿಶೀಲಿಸಿ ಭೂಮಿ ಮಂಜೂರು ಮಾಡಬೇಕು. ಹದ್ದುಬಸ್ತು ಮಾಡಿ, ಪಹಣಿಯನ್ನು ರೈತರಿಗೆ ನೀಡಬೇಕು. ಕೆಲವರಿಗೆ ಭೂಮಿ ಮಂಜೂರಾತಿ ಮಾಡಿದ್ದಾರೆ. ಆದರೆ ಹದ್ದುಬಸ್ತು ಮಾಡಿ ಪಹಣಿ ನೀಡಿಲ್ಲ. ಇನ್ನೂ ಕೆಲವರಿಗೆ ಭೂಮಿಯೇ ಮಂಜೂರಾತಿ ಮಾಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 06 at 7.10.14 PM

ಕೆಲವರ ಜಮೀನುಗಳು ಮುಳುಗಡೆ ಆಗಿಲ್ಲ. ಅಂತಹವರಿಗೆ ಜಮೀನುಗಳನ್ನು ಮನಸ್ಸಿಗೆ ಬಂದಂತೆ ಜಿಲ್ಲಾಡಳಿತ ಮಂಜೂರು ಮಾಡಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಅವೈಜ್ಞಾನಿಕವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿರುವ ಕೆಲವು ರೈತರು ಇದೀಗ ಅಂತಹ ಜಮೀನುಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಮೈಸೂರಿನ ಮುಡಾ ಹಗರಣಕ್ಕಿಂತ ದೊಡ್ಡ ಹಗರಣ ಭೂಮಿ ಮಂಜೂರಾತಿಯಲ್ಲಿ ನಡೆದಿದೆ. ಇದರಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದರು.

ಚಕ್ರಾ–ಸಾವೇಹಕ್ಲು ಮುಳುಗಡೆಯ ಮೂಲ ಸಂತ್ರಸ್ತರ ಪೈಕಿ ಹಲವರು ಇನ್ನೂ ಜಮೀನು ಮಂಜೂರಾತಿಗಾಗಿ ಅಲೆದಾಡುತ್ತಿದ್ದಾರೆ. ಇಂತಹವರಿಗೆ ನ್ಯಾಯ ಕೊಡಿಸುವುದು ಕಂದಾಯ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ. ಆದರೆ ಅವರು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ ಪೊಲೀಸರು!

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಗಣೇಶ್, ಆನಂದ, ಲಿಂಗಪ್ಪ ಗೌಡ್ರು, ಶ್ರೀನಿವಾಸ್ ಚಕ್ಕರ್, ನಾಗರಾಜ್, ಜಯಶೀಲ ಮತ್ತು ಸೈಯದ್ ಸೈಫುಲಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...