ಮೈಸೂರು | ಹಿರಿಯ ರಂಗಕರ್ಮಿ ಡಾ. ನ. ರತ್ನ ಇನ್ನಿಲ್ಲ

Date:

ಹಿರಿಯ ರಂಗಕರ್ಮಿ ನ. ರತ್ನ (89) ಅವರು ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಅವರು, ಇಂದು ಕೊನೆಯುಸಿರೆಳೆದಿದ್ದಾರೆ.

ತಮಿಳುನಾಡಿನ ಚಿದಂಬರಂನಲ್ಲಿ 1934ರ ಡಿಸೆಂಬರ್ 12ರಂದು ನ. ರತ್ನ ಅವರು ಜನಿಸಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ, ಬಿಎಡ್‌ ಪದವಿ ಪಡೆದಿದ್ದ ಅವರು, ಅಮೆರಿಕದಲ್ಲಿ ಉನ್ನತ ವ್ಯಾಸಂಗ ನಡೆಸಿದ್ದರು. ವಾಕ್‌ ಶ್ರವಣ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿದ್ದು, ವೃತ್ತಿಯಲ್ಲಿ ವಾಕ್ ಶ್ರವಣ ಚಿಕಿತ್ಸಾ ತಜ್ಞರಾಗಿದ್ದರು.

1966ರಲ್ಲಿ ಆಯಿಷ್ ಸ್ಥಾಪನೆಯಾದಾಗ ಪ್ರಥಮ ನಿರ್ದೇಶಕರಾಗಿ ನೇಮಕಗೊಂಡಿದ್ದರು. 1985–87ರಲ್ಲಿ ಅಲಿ ಯವರ್ ಜಂಗ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಡಿಸಾಬಿಲಿಟೀಸ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರಿನಲ್ಲಿ ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ರಂಗಭೂಮಿ ಚಟುವಟಿಕೆಗಳಲ್ಲಿಯೂ ಅವರು ತೊಡಗಿಕೊಂಡಿದ್ದರು. ‘ಎಲ್ಲಿಗೆ ಮತ್ತು ಇತರ ಕತೆಗಳು’, ‘ಬೊಂತೆ’, ‘ಗೋಡೆ ಬೇಕೆ ಗೋಡೆ’ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ಪುನರ್ಜನ್ಮ, ಭಿನ್ನ ಬೆನಕ, ಬೋಳಾಚಾರಿಗೆ ನಮನ ಮೊದಲಾದ ರೇಡಿಯೊ ನಾಟಕಗಳನ್ನು ಕೂಡ ರಚಿಸಿದ್ದಾರೆ. 50ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ರಂಗ ಕ್ಷೇತ್ರದಲ್ಲಿನ ಅವರ ಕೊಡುಗೆಗಾಗಿ 2005ರಲ್ಲಿ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, 2013ರಲ್ಲಿ ರಾಜ್ಯೋತ್ಸವ, ಎಂ.ಎನ್.ರಾಯ್ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್ ಸಹಿತ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಮೃತರ ಅಂತ್ಯಕ್ರಿಯೆ ಮೈಸೂರಿನಲ್ಲಿ ಬುಧವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನ. ರತ್ನ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಹಿರಿಯ ರಂಗಕರ್ಮಿ ಮತ್ತು ವಾಕ್‌ಶ್ರವಣ ಶಿಕ್ಷಣ ತಜ್ಞ ಡಾ. ನ.ರತ್ನ ಅವರ ಅಗಲಿಕೆ ಎಂದೆಂದೂ ತುಂಬಲಾರದ ನಷ್ಟ. ಅಧ್ಯಾಪನ ಮತ್ತು ರಂಗಚಟುವಟಿಕೆಗಳ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ನ.ರತ್ನ ಅವರು ದೈಹಿಕ ನ್ಯೂನತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು. ಈ ಪುಣ್ಯಪುರುಷನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...