ಶೋಷಿತ ಸಮುದಾಯಗಳ ಬಗ್ಗೆ ಲಘುವಾಗಿ ಮಾತನಾಡುವ ಪ್ರವೃತ್ತಿಗೆ ಕಡಿವಾಣ: ಎಚ್‌ ಸಿ ಮಹದೇವಪ್ಪ

Date:

  • ನಟ ಉಪೇಂದ್ರ ಹೇಳಿಕೆ ಸಂವಿಧಾನಕ್ಕೂ ಮಾಡಿದ ಅಪಚಾರ
  • ‘ಹೊಲಗೇರಿ’ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ’

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಟ ಉಪೇಂದ್ರ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಚಿವ ಎಚ್‌ ಸಿ ಮಹದೇವಪ್ಪ ತಿಳಿಸಿದ್ದಾರೆ.

ಉಪೇಂದ್ರ ಅವರ ಹೊಲಗೇರಿ ಹೇಳಿಕೆ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, “ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ” ಎಂದಿದ್ದಾರೆ.

“ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ, ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ‌ಸರ್ಕಾರ ಪತನ, ನಮ್ಮ ಸರ್ಕಾರ ರಚನೆ: ಯತ್ನಾಳ್‌ ಭವಿಷ್ಯ

“ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ. ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು ಲಘುವಾಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...