ಬೀದರ್‌ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿ ₹250 ಕೋಟಿ ಅನುದಾನ : ಸಚಿವ ರಹೀಂ ಖಾನ್

Date:

ಬೀದರ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ ₹250 ಕೋಟಿ ಅನುದಾನ ನೀಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ʼಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4ರ ಅಡಿಯಲ್ಲಿ ಅನೇಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ಭಾಗಶಃ ಪೂರ್ಣಗೊಂಡಿದ್ದು, ಇನ್ನೂ ಕೆಲವು ಕಾರ್ಯ ಪ್ರಗತಿಯಲ್ಲಿವೆ. 15ನೇ ಹಣಕಾಸು ಆಯೋಗದ ಅನುದಾನದಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳು ಕೈಗೊಳ್ಳಲಾಗಿದೆ ಹಾಗೂ ರಾಜ್ಯ ಹಣಕಾಸು ಆಯೋಗದಿಂದ SCSP ಮತ್ತು TSP ಯೋಜನೆಗಳ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಚ್ಛ ಭಾರತ ಮಿಷನ್ ಅರ್ಬನ್ 2.0 ಯೋಜನೆಯಡಿ ನಗರ ಪ್ರದೇಶಗಳಲ್ಲಿ ಗೃಹ ಶೌಚಾಲಯ ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಅಮೃತ 2.0 ಯೋಜನೆ ಅಡಿಯಲ್ಲಿ ಉದ್ಯಾನವನ ಹಾಗೂ ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಹುಮನಾಬಾದನಲ್ಲಿ 3 ಉದ್ಯಾನವನ ನಿರ್ಮಾಣ ಮತ್ತು ಬೀದರ್‌ ನಗರದಲ್ಲಿರುವ ಪಾಪನಾಶ ಕೆರೆ ₹5 ಕೋಟಿ ಮತ್ತು ಗೊರನಳ್ಳಿ ಕೆರೆ ₹15 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆʼ ಎಂದು ತಿಳಿಸಿದರು.

ಐದು ಹೊಸ ಇಂದಿರಾ ಕ್ಯಾಂಟೀನ್ :

ಜಿಲ್ಲೆಯಲ್ಲಿ ಹೊಸದಾಗಿ 5 ಇಂದಿರಾ ಕ್ಯಾಂಟೀನ್‌ಗಳು ಆರಂಭವಾಗಲಿವೆ. ಬೀದರ ನಗರದ ನೌಬಾದ್‌, ಓಲ್ಡ್‌ ಸಿಟಿ ಹಾಗೂ ಬಿ.ವ್ಹಿ.ಭೂಮರೆಡ್ಡಿ ಕಾಲೇಜು ಸಮೀಪ ಹೊಸ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡಲಾಗುವುದು. ಚಿಟ್ಟಗುಪ್ಪ ಮತ್ತು ಹಳ್ಳಿಖೇಡ (ಬಿ) ಪಟ್ಟಣದಲ್ಲಿ ತಲಾ ಒಂದು ಇಂದಿರಾ ಕ್ಯಾಂಟೀನ್ ಆರಂಭವಾಗಲಿವೆʼ ಎಂದು ಮಾಹಿತಿ ನೀಡಿದರು. ‌

ಇ-ಖಾತಾಗೆ ಸಂಬಂಧಿಸಿದ ಕಾರ್ಯಗಳು ಕೂಡ ತ್ವರಿತವಾಗಿ ಪ್ರಗತಿ ಕಾಣಬೇಕು ಅಧಿಕಾರಿಗಳಿಗೆ ತಿಳಿಸಿದರು.

ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ್ ಮಾತನಾಡಿ, ʼಹುಮನಾಬಾದ, ಚಿಟ್ಟಗುಪ್ಪಾ, ಹಳ್ಳಿಖೇಡ (ಬಿ) ಪುರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕುʼ ಎಂದು ಸಚಿವರಿಗೆ ಮನವಿ ಮಾಡಿದರು

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಹೊಸದಾಗಿ ಆಗಿರುವ ಮಹಾನಗರ ಪಾಲಿಕೆಗೆ ಬೀದರ ದಕ್ಷಿಣ ವಿಧಾನ ಸಭಾ ಕ್ಷೇತ್ರದ 8 ಗ್ರಾಮಗಳು ಸೇರ್ಪಡೆಯಾಗಿದ್ದು, ಅವುಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕುʼ ಎಂದು ಸಚಿವರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪೌರಾಡಳಿತ ಮತ್ತು ಹಜ್ ಸಚಿವರ ಆಪ್ತ ಕಾರ್ಯದರ್ಶಿ ಕೆ.ಮುರಳಿಧರ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಸಭೆ ಆಯುಕ್ತ ಶಿವರಾಜ ರಾಠೋಡ ಹಾಗೂ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...