ಬೀದರ್‌ | ರೈತರಿಗೆ ಸುಧಾರಿತ ಬೇಸಾಯ ಪದ್ದತಿ ಅವಳವಡಿಸಿಕೊಳ್ಳಲು ಸಲಹೆ

Date:

ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗೆ ತಕ್ಕಂತೆ ಹೊಂದುಕೊಂಡು ಸುಧಾರಿತ ಬೇಸಾಯ ಕ್ರಮಗಳನ್ನು ಅವಳವಡಿಸಿಕೊಳ್ಳಬೇಕು ಎಂದು ಬೀದರ್ ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ್‌ ಅವರು ರೈತರಿಗೆ ಸಲಹೆ ನೀಡಿದ್ದಾರೆ.

ಬೀದರ್‌ನಲ್ಲಿರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಕೃಷಿ ಸಂಶೋಧನಾ ಕೇಂದ್ರ ಹಾಗೂ ಭಾರತ ಹವಾಮಾನ ವಿಭಾಗ ಆಯೋಜಿಸಿದ್ದ ‘”ಕೃಷಿಯಲ್ಲಿ ಬದಲಾಗುತ್ತಿರುವ ಹವಾಮಾನದ ಪರಿಣಾಮಗಳು ಹಾಗೂ ವಿವಿಧ ಬೆಳೆ ಪದ್ಧತಿಗಳ ಮಹತ್ವ’ ಕುರಿತು ರೈತ ಜಾಗೃತಿ ಕಾರ್ಯಕ್ರಮ ನಡೆದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಡಾ. ಸುನೀಲ ಕುಮಾರ ಎನ್.ಎಮ್., “ಹವಾಮಾನ ಸಂಬಂಧಿತ ಮಳೆಯ ಮುನ್ಸೂಚನೆಯ ಲಾಭ ಮಾಹಿತಿ ಪಡೆದುಕೊಂಡು ತಮ್ಮ ದೈನಂದಿನ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿ ಹೆಚ್ಚಿನ ಇಳುವರಿ ಪಡೆಯಲು ಸಲಹೆ ನೀಡಿದರು. ಕೃಷಿಯಲ್ಲಿ ಆಗುವ ನಷ್ಟವನ್ನು ಅವುಗಳಿಂದ ಹೇಗೆ ಕಡಿಮೆಗೊಳಿಸಬೇಕು” ಎಂದು ರೈತರಿಗೆ ತಿಳಿಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಉಗ್ರಾಣ ಸಂಸ್ಥೆಯ ವ್ಯವಸ್ಥಾಪಕರಾದ ರೀತಾ ಬನ್ನಸೂಧ್ ಮಾತನಾಡಿ, ಹವಾಮಾನ ಆಧಾರಿಸಿ ದವಸ ಧಾನ್ಯಗಳನ್ನು ಯಾವ ರೀತಿ ಉಗ್ರಾಣದಲ್ಲಿ ಶೇಖರಿಸಿ ಅವುಗಳ ಗುಣಮಟ್ಟವನ್ನು ದೀರ್ಘಕಾಲದವರೆಗೆ ಕಾಪಾಡುವುದು ಮತ್ತು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಉಗ್ರಾಣದ ವಿವಿಧ ಸವಲತ್ತುಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಟ್ಟರು.

GKMS programme ಬೀದರ್‌

ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ. ಸುನೀಲ ಕುಲಕರ್ಣಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಮುಂಬರುವ ಹವಾಮಾನ ವೈಪರಿತ್ಯ ಮತ್ತು ಅವುಗಳಿಂದ ಹೇಗೆ ನಾವು ರಕ್ಷಿಸಿಕೊಳ್ಳಬೇಕು ಕುರಿತು ತಿಳಿಸಿದರು.

ಕಲಬುರಗಿ ಸಹ ಸಂಶೋಧನಾ ನಿರ್ದೇಶಕ ಡಾ.ಬಿ.ಎಂ.ದೊಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹವಾಮಾನ ಪರಿಸ್ಥಿತಿ ಅನುಗುಣವಾಗಿ ಹೊಸ ಹೊಸ ತಳಿಗಳನ್ನು ಅಭಿವೃದ್ಧಿ ಪಡಿಸುವುದರ ಮಾರ್ಗದರ್ಶನ ನೀಡಿದರು.ತೋಟಗಾರಿಕೆ ಮತ್ತು ಅರಣ್ಯ ಬೆಳೆಗಳ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ರೈತ ಜಾಗೃತಿ ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ.ಸುನೀಲ ಕುಲಕರ್ಣಿ, ಬಸವರಾಜ ಬಿರಾದಾರ, ಡಾ.ಆರ್.ಎಲ್.ಜಾಧವ್, ಮತ್ತು ಡಾ.ಜ್ಞಾನದೇವ ಬಿ. ಡಾ. ಮಲ್ಲಿಕಾರ್ಜುನ ಎನ್. ವಿವಿಧ ವಿಷಯದ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬದುಕಿನಲ್ಲಿ ಜಿಗುಪ್ಸೆ; ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

ಬೇಸಾಯ ಶಾಸ್ತ್ರದ ಉಪನ್ಯಾಸಕ ಡಾ. ಆರ್.ಎಲ್. ಜಾಧವ, ಸ್ವಾಗತಿಸಿದರು, ರೋಹಿತ್ ಬಿರಾದಾರ ನಿರೂಪಿಸಿದರು, ವೈಜಿನಾಥ ಕೆ.ವಂದಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಸುಮಾರು 185 ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಾಭ ಪಡೆದುಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...