ʼಭಾರತ್ ಜೋಡೋʼ ಪಾದಯಾತ್ರೆಯ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ : ವಿ.ಎಸ್ ಉಗ್ರಪ್ಪ

Date:

  • 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ.
  • ಜೋಡೋ ಯಾತ್ರೆ ಮೂಲಕ ಜನರಲ್ಲಿ ರಾಷ್ಟ್ರ ಪ್ರೇಮ, ಭಾವೈಕ್ಯತೆ , ಸೌಹಾರ್ದತೆ ಬಿತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತ್ರತ್ವದಲ್ಲಿ ನಡೆದ ʼಭಾರತ್ ಜೋಡೋʼ ಪಾದಯಾತ್ರೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದ್ದು, ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಬಳ್ಳಾರಿ ನಗರದ ಸರ್ಕಾರಿ ವಸತಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ ಯುವ  ಮುಖಂಡ ರಾಹುಲ್ ಗಾಂಧಿ ಅವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡು ಇಂದಿಗೆ ಒಂದು ವರ್ಷವಾಗಿದೆ. ಭಾರತದ ಇತಿಹಾಸದಲ್ಲಿ ಗಾಂಧೀಜಿ, ವಿನೋಬಾ ಭಾವೆ ಸೇರಿದಂತೆ ಅನೇಕರು ದೇಶದ ಸಮಸ್ಯೆಗಳನ್ನು ವಿದ್ಯಮಾನಗಳನ್ನು ಅರ್ಥೈಸಿಕೊಳ್ಳಲು ಪಾದಯಾತ್ರೆ ಮಾಡಿದ್ದರು. ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ” ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಕೈಗೊಂಡು ದೇಶದ ವಿವಿಧ ವಿಷಯ ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಜನರಲ್ಲಿ ಸಾಮರಸ್ಯ, ಐಕ್ಯತೆ ಮೂಡಿಸಲು ದೇಶದ ವಿವಿಧ ಆಯಾಮಗಳು ಅರ್ಥೈಸಿಕೊಳ್ಳಲು ಪಾದಯಾತ್ರೆ ಹಮ್ಮಿಕೊಂಡ ಏಕೈಕ ರಾಜಕಾರಣಿ ರಾಹುಲ್ ಗಾಂಧಿ, ಪಾದಯಾತ್ರೆ ಮೂಲಕ ಜನರಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತ, ಸೌಹಾರ್ದತೆ, ಸಾಮರಸ್ಯ ಮೂಡಿಸಿ ಮಹಾನ್ ರಾಷ್ಟ್ರ ನಾಯಕನಾಗಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಹೊರಹೊಮ್ಮಿದ್ದಾರೆ” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖಂಡ ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ. ಕಾಂಗ್ರೆಸ್ ಪಕ್ಷದ ವಕ್ತಾರರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಕಾಂಗ್ರೆಸ್ ಪಕ್ಷ ಸಂಘಟಿತವಾಗಿದೆ. ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಪಾದಯಾತ್ರೆ ಯಶಸ್ಸು ಕಂಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಉದ್ಯೋಗ, ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ

ಸುದ್ದಿಗೋಷ್ಠಿಯಲ್ಲಿ ವೆಂಕಟೇಶ್ ಹೆಗ್ಡೆ, ಸಂಗಕಲ್ಲು ವಿಜಯ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.

ವರದಿ: ರಾಧಾಕೃಷ್ಣ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...