ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಬೇಡ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

Date:

  • ಕೃಷಿ ಇಲಾಖೆಯಲ್ಲಿ ಖಾಲಿ ಇರುವ 5,195 ಹುದ್ದೆಗಳ ಭರ್ತಿಗೆ ಕ್ರಮ
  • ‘ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒ ಹಾಜರಿರಬೇಕು’

ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

“ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿಮಿ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022-23 ನೇ ಸಾಲಿನ ಮೂರನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (84%) ಪ್ರದೇಶದಲ್ಲಿ ಕೈಗೊಳ್ಳಲಾಗಿರುತ್ತದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ” ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆ.ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. 1.68 ಲಕ್ಷ ಮೆ ಟನ್ ರಸಗೊಬ್ಬರ ಕಾಪು ದಾಸ್ತಾನು(Buffer Stock) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು, ಸಿಎಂಗೆ ಮನವಿ ಮಾಡುತ್ತೇವೆ: ಸತೀಶ್‌ ಜಾರಕಿಹೊಳಿ

ರೈತರಿಗೆ ಪೂರೈಕೆಯಲ್ಲಿ ವಿಳಂಬ ಆಗಬಾರದು

“ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.

“ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣು ಪರೀಕ್ಷೆ ರಿಪೋರ್ಟ್ ಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗ್ತೀರಾ” ಎಂದು ಸಚಿವರು ಎಚ್ಚರಿಕೆ ನೀಡಿದರು.

ನೆಟೆರೋಗ: ಶೀಘ್ರದಲ್ಲೇ ಪರಿಹಾರ ಬಿಡುಗಡೆ

“2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು” ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.‌

ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ

“ಕೃಷಿ ಇಲಾಖೆಯಲ್ಲಿ ಶೇ‌.58% ನಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ. ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ‌” ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...