ದಾವಣಗೆರೆ | ಕಾಂಗ್ರೆಸ್‌ ಸರಕಾರ ಅಸ್ಥಿರಗೊಳಿಸುವುದು ಅಸಾಧ್ಯ : ಶಾಸಕ ಡಿ.ಜಿ.ಶಾಂತನಗೌಡ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಗುಡುಗಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಕಾಂಗ್ರೆಸ್ ಪಕ್ಷ ಮತ್ತು ಅಹಿಂದ ಒಕ್ಕೂಟ, ಸಿದ್ದರಾಮಯ್ಯ ಅಭಿಮಾನಿ ಬಳಗ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನು ಇಲ್ಲ. ಹೀಗಿದ್ದರೂ ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಾಯಕರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೊಡಿಸುವ ಮೂಲಕ ರಾಜ್ಯ ಸರ್ಕಾರವನ್ನು ಮುಗಿಸುವ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‌.ಬಿ.ಮಂಜಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಿದರೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಬಹುದು ಎಂದು ಭಾವಿಸಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕುತಂತ್ರ ಫಲಿಸುವುದಿಲ್ಲ. ಭ್ರಷ್ಟ ವ್ಯಕ್ತಿಯೊಬ್ಬ ರಾಜ್ಯಪಾಲರಿಗೆ ಖಾಸಗಿ ದೂರು ನೀಡಿದ ಏಳೆಂಟು ಗಂಟೆಯೊಳಗೆ ಒತ್ತಡಕ್ಕೆ ಮಣಿದು ಶೋಕಾಸ್ ನೋಟಿಸ್ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದರ ಹಿಂದಿನ ಹುನ್ನಾರವೇನು ಎಂದು ಪ್ರಶ್ನಿಸಿದರು.

ಅಹಿಂದ ಒಕ್ಕೂಟದ ಮುಖಂಡ ಹಾಗೂ ಕುರುಬ ಸಮಾಜದ ಅಧ್ಯಕ್ಷ ನೆಲಹೊನ್ನೆ ಮೋಹನ್ ಮಾತನಾಡಿ, ಕುರುಬ ಸಮಾಜದ ಮೇರು ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಶ್ವತವಾಗಿ ಅಧಿಕಾರ ಕಳೆದುಕೊಳ್ಳಲಿವೆ. ಸಿದ್ದರಾಮಯ್ಯ ಅವರ ಆಡಳಿತ ತೆರೆದ ಪುಸ್ತಕದಂತಿದೆ. ಬಿಜೆಪಿ, ಜೆಡಿಎಸ್‌ನವರು ಕುತಂತ್ರದಿಂದ ಸಿಎಂ ಸಿದ್ದರಾಮಯ್ಯನವರನ್ನು ಏನು ಮಾಡಲಾಗುವುದಿಲ್ಲ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಪ್ರತಿಭಟನೆಯಲ್ಲಿ ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ನೇಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ನಾಗಪ್ಪ, ಸಾಧು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ರವೀಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಾಜೀದ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ.ವಿಶ್ವನಾಥ್, ಎ.ಆರ್.ಚಂದ್ರಶೇಖರ್, ಎಚ್.ಎ.ಉಮಾಪತಿ, ಪ್ರಜಾ ಪರಿವರ್ತನ ವೇದಿಕೆ ತಾಲೂಕು ಅಧ್ಯಕ್ಷರ ಹನುಮಂತಪ್ಪ, ಕೆ.ಒ.ಲೋಕೇಶ್ ಕುಳಘಟ್ಟೆ, ಶಿವಮೂರ್ತಪ್ಪ, ಪ್ರಭು, ಲಕ್ಷ್ಮೀದೇವಿ ಹಾಗೂ ಇತರೆ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...