ಯಾದಗಿರಿ| ವಿವಿಧ ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

Date:

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಬಸವಲಿಂಗಮ್ಮ ನಾಟೇಕರ್‌ ಮಾತನಾಡಿ, ʼಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಳ, ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಆಗ್ರಹಿಸಿದರು.

ನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆ ಈಡೇರಿಕೆಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ, ಬೀದರ್‌, ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆ ಮುಂದುವರಿಕೆ ಸಾಧ್ಯತೆ

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಅನೀತಾ ಹಿರೇಮಠ, ಖಜಾಂಚಿ ಬಸಮ್ಮ ಸೇರಿದಂತೆ ಸಿಪಿಐ(ಎಂ) ಮುಖಂಡರಾದ ಚನ್ನಪ್ಪ ಆನೆಗುಂದಿ, ದವಲಸಾಬ್ ನದಾಫ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...