ಯಾದಗಿರಿ | ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಎಐಡಿಎಸ್‌ಒ ಒತ್ತಾಯ

Date:

ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್ 2 ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕ ಶಿಲ್ಪಾ.ಬಿ. ಕೆ ಮಾತನಾಡಿ, “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸೇರಿದಂತೆ ಹಲವು ವಿಭಾಗಗಳ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ವಿದ್ಯಾರ್ಥಿ ವೇತನವು ಮಂಜೂರಾಗಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅರ್ಜಿ ಹಾಕಿದ್ದ ವಿದ್ಯಾರ್ಥಿವೇತನವೂ ಇಲ್ಲಿಯವರೆ ವಿದ್ಯಾರ್ಥಿಗಳಿಗೆ ದೊರೆತಿಲ್ಲ. ಇನ್ನು ಕೆಲವು ದಿನಗಳ ಹಿಂದಷ್ಟೇ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಕೂಡಾ ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 5 ಸಾವಿರದಿಂದ 60 ಸಾವಿರವರೆಗೆ ವಿತರಿಸುತ್ತಿದ್ದ ವಿದ್ಯಾರ್ಥಿ ವೇತನದ ಮೊತ್ತವನ್ನು 1100 ರಿಂದ 11 ಸಾವಿರಕ್ಕೆ ಇಳಿಸಲಾಗಿದೆ. ಇದು ಅತ್ಯಂತ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಎಲ್ಲಾ ಹಂತದ ಶಿಕ್ಷಣವು ವ್ಯಾಪಾರಿಕರಣಗೊಂಡು ಶುಲ್ಕಗಳು ಗಗನಕ್ಕೇರಿವೆ. ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದು ಅತ್ಯಂತ ದುಸ್ತರವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದ ಶಿಷ್ಯವೇತನವು ಸಾಕಷ್ಟು ಸಹಕಾರಿಯಾಗಿದೆ. ಈ ಶಿಷ್ಯವೇತನದಿಂದಾಗಿ ಬಡ ವಿದ್ಯಾರ್ಥಿಗಳು ಪಿಯ, ಪದವಿ ಸೇರಿದಂತೆ ಇಂಜಿನಿಯರಿಂಗ್ ಮತ್ತು ಮೆಡಿಕಲ್ ನಂತಹ ಉನ್ನತ ವ್ಯಾಸಂಗವನ್ನು ಕೂಡ ಪಡೆಯಬಹುದಾಗಿದೆ. ಆದರೆ ಈಗ ಭಾರೀ ಪ್ರಮಾಣದಲ್ಲಿ ಶಿಷ್ಯವೇತನದ ಮೊತ್ತವನ್ನು ಕಡಿತಗೊಳಿಸಿರುವುದು ಹಾಗೂ ವಿತರಣೆಯಲ್ಲಿ ದೀರ್ಘ ವಿಳಂಬವಾಗಿರುವುದು ಕಾರ್ಮಿಕರ ಹಾಗೂ ಬಡಮಕ್ಕಳ ಶಿಕ್ಷಣದ ಕನಸುಗಳನ್ನು ಚಿವುಟಿ ಹಾಕಿದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್ ಮಾತನಾಡಿ, “ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು” ಎಂದು ಒತ್ತಾಯಿಸಿದರು.

“ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು ಮತ್ತು ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು. ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ರಾಜ್ಯ ಸರ್ಕಾರವು ನೆರವಾಗಬೇಕೆಂದು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನ. 26 ರಿಂದ 28 ವರೆಗೆ ಬೆಂಗಳೂರಿನಲ್ಲಿ ರಾಜ ಭವನ ಚಲೋ ಮಹಾಧರಣಿ

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಶಬಾನಾ, ಶಿಲ್ಪಾ, ಪದ್ಮಾ, ರಾಧಿಕಾ, ವಿದ್ಯಾ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...