ಕಲಬುರಗಿ | ಹೊನಗುಂಟಾ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಎಐಕೆಕೆಎಮ್‌ಎಸ್ ಆಗ್ರಹ

Date:

ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೊನಗುಂಟಾ ಗ್ರಾಮವು ಗ್ರಾಮ ಪಂಚಾಯತ್‌ ಕೇಂದ್ರವಾಗಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಗ್ರಾಮ ಪಂಚಾಯಿತಿಯು ಸಂಪೂರ್ಣವಾಗಿ ವಿಫಲವಾಗಿದೆ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ರಾಜೇಂದ್ರ ಅತನೂರ ಆಕ್ರೋಶ ವ್ಯಕ್ತಪಡಿಸಿದರು.

ಹೊನಗುಂಟಾ ಗ್ರಾಮಸ್ಥರಿಗೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಗ್ರಾಮ ಪಂಚಾಯತ್‌ ಎದುರುಗಡೆ ಪ್ರತಿಭಟಿಸಿ ಗ್ರಾ.ಪಂ. ಪಿಡಿಓಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು, ಸೂಕ್ತ ರಸ್ತೆ, ಬೀದಿ ದೀಪ, ಸಾರ್ವಜನಿಕ ಗ್ರಂಥಾಲಯ, ಮಹಿಳಾ ಶೌಚಾಲಯ ಹಾಗೂ ಗ್ರಾಮದ ನೈರ್ಮಲ್ಯ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿ ಆಡಳಿತವು ಸೋತಿದೆ. ಮತ್ತೊಂದೆಡೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಕೆಲಸ ನೀಡುತ್ತಿಲ್ಲ. ಇದರಿಂದ ಗ್ರಾಮಸ್ಥರು ಉದ್ಯೋಗಕ್ಕಾಗಿ ನಗರಗಳಿಗೆ ಗೂಳೆ ಹೋಗುತ್ತಿದ್ದಾರೆ. ಕೂಡಲೇ ನಿರುದ್ಯೋಗ ಕಾರ್ಮಿಕರಿಗೆ ಮನರೇಗಾ ಕೆಲಸ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಶಕಗಳಿಂದ ವಾಸವಿರುವ ಇಲ್ಲಿನ ಜನರು ನಿಗದಿತವಾಗಿ ತಮ್ಮ ಮನೆಯ ತೆರಿಗೆ ಪಾವತಿಸಿದ್ದಾರೆ. ಆದರೆ  ಜನರು ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾರೆಂದು ಹೇಳುತ್ತಿದ್ದಾರೆ. ಮುಗ್ಧ ಜನರ ಹಣ ದುರ್ಬಳಕೆ ಮಾಡಿಕೊಂಡು ಸರಕಾರಕ್ಕೆ ಹಾಗೂ ಜನರಿಗೆ ಮೋಸ ಮಾಡುತ್ತಿದ್ದಾರೆ. ಅಲ್ಲದೆ ಒಬ್ಬರ ಮನೆಯ ಹಕ್ಕು ಪತ್ರವನ್ನು ಮತ್ತೊಬ್ಬರ ಹೆಸರಿಗೆ ಮಾಡಿಕೊಟ್ಟು ಜನರನ್ನು ಆಂತಕಕ್ಕೆ ದೂಡಿದ್ದಾರೆ” ಎಂದು ಆರೋಪಿಸಿದರು.

ತಾವು ವಾಸಿಸುತ್ತಿರುವ ಮನೆಯು ಬೇರೆಯವರ ಹೆಸರಿನಲ್ಲಿರುವುದು ಕಂಡು ಗ್ರಾಮಸ್ಥರು ದಿಕ್ಕುತೋಚದೆ ಹಲವು ಬಾರಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯಿತ್ ಹಾಗೂ ಜಿಲ್ಲಾ ಪಂಚಾಯಿತಿಗೆ‌ ಮನವಿ ಸಲ್ಲಿಸಿ ತಪ್ಪು ಸರಿಪಡಿಸಲು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು. ನಿರ್ಲಕ್ಷ್ಯ ವಹಿಸಿದರೆ ತೀವ್ರ ಹೋರಾಟ ಸಂಘಟಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ಈ ಸಂದರ್ಭದಲ್ಲಿ ಪ್ರಮುಖರಾದ ನೀಲಕಂಠ ಹುಲಿ, ಚಂದ್ರು ಮರಗೋಳ, ದೇವರಾಜ ರಾಜೋಳ, ಮೌನೇಶ ರಾಜೋಳ, ದೀಪಣ್ಣ ಓಲೇ, ಭೀಮು ವಾಲಿಕರ, ಬಸಲಿಂಗಪ್ಪ ದಂಡಾ, ಬಾಬು ಆಡಿನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...