ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪರಿಷ್ಕರಿಸಲು ಐಟಾ ಮನವಿ

Date:

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (ಐಟಾ) ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ಅವರು ಪರೀಕ್ಷಾ ಮಂಡಳಿಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಮಾರ್ಚ್ 24, 2025ರಿಂದ ಆರಂಭವಾಗಿ ಏಪ್ರಿಲ್ 11, 2025ರಂದು ಮುಕ್ತಾಯಗೊಳ್ಳಲಿವೆ. ಮಾರ್ಚ್ 28ರಂದು ಇಂಗ್ಲಿಷ್ ದ್ವಿತೀಯ ಭಾಷೆಯ ಪರೀಕ್ಷೆಯನ್ನು ನಡೆಸಲು ಯೋಜನೆ ಇದೆ. ಅದೇ ದಿನ ಮುಸ್ಲಿಂ ಸಮುದಾಯದ ಪವಿತ್ರ ರಮಝಾನ್ ತಿಂಗಳ ಜುಮಾತುಲ್ ವಿದಾ ಹಾಗೂ ಶಬೆ ಖದರ್ ಇರುವ ಕಾರಣ, ವಿದ್ಯಾರ್ಥಿಗಳಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಇವುಗಳು ಮುಸ್ಲಿಂ ಸಮುದಾಯಕ್ಕೆ ಪವಿತ್ರ ದಿನಗಳಾಗಿದ್ದು, ಆ ದಿನ ರಾತ್ರಿ ಜಾಗರಣೆ ಹಾಗೂ ವಿಶೇಷ ಪ್ರಾರ್ಥನೆಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.

ಅದೇ ರೀತಿ, ಏಪ್ರಿಲ್ 4 ಮತ್ತು ಏಪ್ರಿಲ್ 11 ರಂದು ಶುಕ್ರವಾರ ದಿನದಂದು ಪರೀಕ್ಷೆಗಳು ನಡೆಯುವ ಕಾರಣ, ಸಾಮೂಹಿಕ ಶುಕ್ರವಾರದ ಪ್ರಾರ್ಥನೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ, ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ಸಚಿವರು ಈ ಸಮಸ್ಯೆಯನ್ನು ಪರಿಗಣಿಸಿ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಅಂತಿಮ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಐಟಾ ಸರ್ಕಾರವನ್ನು ವಿನಂತಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...