ಕಾರ್ಮಿಕ ವಿರೋಧಿ ಸಂಹಿತೆ ಜಾರಿ: ಕೇಂದ್ರ ಸರ್ಕಾರದ ವಿರುದ್ಧ ಎಐಯುಟಿಯುಸಿ ಆಕ್ರೋಶ

Date:

ಕಾರ್ಮಿಕರು ಮತ್ತು ಕಾರ್ಮಿಕ ಪರ ಸಂಘಟನೆಗಳು‌, ಟ್ರೇಡ್ ಯೂನಿಯನ್‌ಗಳು ದೇಶಾದ್ಯಂತ ಈಗಾಗಲೇ ಭಾರೀ ಪ್ರತಿರೋಧ ಒಡ್ಡಿದಾಗಲೂ, ಹೋರಾಟ ಮಾಡಿದಾಗಲೂ, ಕಾರ್ಮಿಕರ ಹೋರಾಟವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ‌ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿರುವುದನ್ನು ಖಂಡಿಸಿ ರಾಜ್ಯದ ಹಲವೆಡೆ ಹೋರಾಟ ನಡೆಯುತ್ತಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 4 ಕಾರ್ಮಿಕ ವಿರೋಧಿ ಸಂಹಿತೆಗೆ ವಿರೋಧ ವ್ಯಕ್ತಪಡಿಸಿರುವ ಎಐಸಿಸಿಟಿಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಟ್ಟು ಹಾಕುವ ಮೂಲಕ ಇಂದು ರಾಯಚೂರು, ದಾವಣಗೆರೆ ಹಾಗೂ ಮೈಸೂರು ನಗರಗಳಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಸರ್ಕಾರ ಇಂದು ಜಾರಿಗೊಳಿಸಿದ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಮೈಸೂರಿನಲ್ಲಿ AIUTUC ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರು, ದುಡಿಯುವ ವರ್ಗದ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ದೇಶದಾದ್ಯಂತ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿ ಮಾಡುತ್ತಿದೆ. ಕೇಂದ್ರ ಸರ್ಕಾರದ ಈ ಆಪ್ರಜಾತಾಂತ್ರಿಕ ಕ್ರಮವನ್ನು ಖಂಡಿಸಿದ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದೆ.

ಕಾರ್ಮಿಕ ವಿರೋಧಿ ಸಂಹಿತೆ 1

ಕೇಂದ್ರ ಸರ್ಕಾರವು  ಜಾರಿಗೆ ತಂದಿರುವ ಈ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು(ಶ್ರಮ ಸಂಹಿತೆಗಳು) ‘ವ್ಯವಹಾರವನ್ನು ಸುಲಭಗೊಳಿಸುವ'(Ease of Doing business) ಹೆಸರಿನಲ್ಲಿ, ಕಾರ್ಮಿಕರ ಹಕ್ಕುಗಳನ್ನು ಮತ್ತು ರಕ್ಷಣೆಯನ್ನು ಮೊಟಕುಗೊಳಿಸುವ ಮೂಲಕ, ಬಂಡವಾಳಶಾಹಿ ಹಾಗೂ ಉದ್ಯಮಗಳ ಪರವಾಗಿವೆ. ಇದು ಪ್ರಗತಿಪರ ಸುಧಾರಣೆಯಲ್ಲ, ಬದಲಿಗೆ ಕಾರ್ಮಿಕ ವಿರೋಧಿ ನಡೆಯಾಗಿದೆ” ಎಂದು ನಮ್ಮ ಕಾರ್ಮಿಕ ಸಂಘಟನೆ ಆರೋಪಿಸಿದೆ.

ಕಾರ್ಮಿಕ ಸಂಹಿತೆಗಳ ʼಕಾರ್ಮಿಕ ವಿರೋಧಿʼ ಅಂಶಗಳು:

ವಜಾ ಮತ್ತು ಮುಚ್ಚುವಿಕೆಯನ್ನು ಸುಲಭಗೊಳಿಸುವುದು: “ಕೈಗಾರಿಕಾ ಸಂಬಧಗಳ ಸಂಹಿತೆ(Industrial relations code) ಅಡಿಯಲ್ಲಿ, ಉದ್ಯೋಗಿಗಳನ್ನು ವಜಾ ಮಾಡಲು ಅಥವಾ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರದ ಅನುಮತಿಯ ಅಗತ್ಯವಿರುವ ಸಂಸ್ಥೆಗಳ ಗಾತ್ರವನ್ನು ಹೆಚ್ಚಿಸಲಾಗಿದೆ. ಉದಾಹರಣೆಗೆ, ಕೆಲವು ರಾಜ್ಯಗಳಲ್ಲಿ 300 ಕಾರ್ಮಿಕರನ್ನು ಹೊಂದಿರುವ ಸಂಸ್ಥೆಗಳಿಗೆ ಈ ಮಿತಿ ವಿಸ್ತರಿಸಲಾಗಿದೆ(ಹಿಂದೆ ಇದು ೧೦೦ ಇತ್ತು). ಇದರಿಂದಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಸಂಸ್ಥೆಗಳು ಸುಲಭವಾಗಿ ಕಾರ್ಮಿಕರನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ, ಇದು ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತದೆ” ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

ಕಾರ್ಮಿಕರ ಪ್ರತಿಭಟನೆಯ ಹಕ್ಕನ್ನು ಮೊಟಕುಗೊಳಿಸುವುದು: “ಕೈಗಾರಿಕಾ ಸಂಬಧಗಳ ಸಂಹಿತೆಯು ʼಮುಷ್ಕರʼ (Strike) ಎಂಬ ಪದದ ವ್ಯಾಖ್ಯೆಯನ್ನು ವಿಸ್ತರಿಸಿದೆ ಮತ್ತು ಮುಷ್ಕರಕ್ಕೆ ಹೋಗುವ ಮೊದಲು 14-ದಿನಗಳ ನೋಟಿಸ್ ಕಡ್ಡಾಯಗೊಳಿಸಿದೆ. ಇದು ಮುಷ್ಕರ ನಡೆಸುವುದನ್ನು ಕಷ್ಟಕರವಾಗಿಸುತ್ತದೆ. ಅಲ್ಲದೆ ಕಾರ್ಮಿಕರ ಸಂಘಟಿತ ಚೌಕಾಸಿ(Collective Bargaining) ಶಕ್ತಿಯನ್ನು ದುರ್ಬಲಗೊಳಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ವಿರೋಧಿ ಸಂಹಿತೆ 2
ದಾವಣಗೆರೆ

ಕೇಂದ್ರೀಕೃತ ಅಧಿಕಾರ ಮತ್ತು ದುರ್ಬಲ ಪರಿಶೀಲನೆ: “ಕಾರ್ಮಿಕ ಕಾಯಿದೆಗಳನ್ನು ಕೇಂದ್ರೀಕರಿಸುವುದರಿಂದ, ಸಂಸ್ಥೆಗಳು ಮತ್ತು ಮಾಲೀಕರು ಕಡಿಮೆ ನಿಯಂತ್ರಣ ಹಾಗೂ ಪರಿಶೀಲನೆಗೆ ಒಳಪಟ್ಟಿರುತ್ತಾರೆ. ಸಂಹಿತೆಗಳು ಅನುಸರಣೆಯನ್ನು ಸರಳಗೊಳಿಸುವುದಾಗಿ ಹೇಳಿದರೂ, ಇದು ವಾಸ್ತವವಾಗಿ ದುರ್ಬಲ ಕಾರ್ಮಿಕ ಶ್ರಮ ಪರಿಶೀಲನಾ ವ್ಯವಸ್ಥೆಗೆ(Labour Inspection System) ಕಾರಣವಾಗಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಭದ್ರತೆಯಿಂದ ಹೊರಗಿಡುವುದು: “ಸಾಮಾಜಿಕ ಭದ್ರತಾ ಸಂಹಿತೆ(Code on Social Security) ಗುತ್ತಿಗೆ ಕಾರ್ಮಿಕರು(Contract worjersy) ಮತ್ತು ಗಿಗ್ ವರ್ಕರ್ಸ್(Gig workers) ಬಗ್ಗೆ ಮಾತನಾಡಿದರೂ, ಎಲ್ಲ ಕಾರ್ಮಿಕರಿಗೆ ಸಮಗ್ರ ಮತ್ತು ಕಡ್ಡಾಯ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದಿಲ್ಲ” ಎಂದು ಹಲವರು ವಾದಿಸಿದ್ದಾರೆ.

ಕಾರ್ಮಿಕರ ಕೆಲಸದ ಸಮಯದ ಹೆಚ್ಚಳದ ಆತಂಕ: “ವೇತನ ಸಂಹಿತೆ(Code on Wages)ಯಲ್ಲಿ ಕೆಲಸದ ಸಮಯಕ್ಕೆ ಸಂಬಂಧಿಸಿದ ನಿಯಮಗಳಲ್ಲಿನ ಬದಲಾವಣೆಗಳು, ಕೆಲವೊಮ್ಮೆ, ಕೆಲಸದ ಸಮಯವನ್ನು 8 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸಂಸ್ಥೆಗಳಿಗೆ ಅವಕಾಶ ನೀಡಬಹುದೆಂಬ ಆತಂಕವಿದೆ(ವಾರದ ಒಟ್ಟು ಕೆಲಸದ ಸಮಯವನ್ನು ಬದಲಾಯಿಸದಿದ್ದರೂ ಸಹ), ಇದು ಕಾರ್ಮಿಕರ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ” ಎಂದರು.

ಕಾರ್ಮಿಕ ವಿರೋಧಿ ನೀತಿ ಸಂಹಿತೆ
ರಾಯಚೂರು

​”ಸಾರಾಂಶದಲ್ಲಿ, ಈ ಸಂಹಿತೆಗಳು ‘ಈಸ್ ಆಫ್ ಡೂಯಿಂಗ್ ಬಿಸಿನೆಸ್’ ಅನ್ನು ಸಾಧಿಸಲು ‘ಈಸ್ ಆಫ್ ಫೈರಿಂಗ್ ವರ್ಕರ್ಸ್'(ಕಾರ್ಮಿಕರನ್ನು ವಜಾ ಮಾಡುವ ಸುಲಭ) ಮಾರ್ಗವನ್ನು ಆರಿಸಿಕೊಂಡಿವೆ ಮತ್ತು ಕಾರ್ಪೊರೇಟ್ ವಲಯಕ್ಕೆ ಅನುಕೂಲ ಮಾಡಿಕೊಟ್ಟಿವೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿ ಸದಸ್ಯ ಶಿವಾನಂದ್, ಜಂಟಿ ಕಾರ್ಯದರ್ಶಿಗಳಾದ ಮುದ್ದುಕೃಷ್ಣ, ಪುಟ್ಟರಾಜು, ಜಿಲ್ಲಾ ಸಮಿತಿಯ ಸದಸ್ಯರಾದ ಹರೀಶ್ ‌ಎಸ್ ಎಚ್, ವಿವಿಧ ಘಟಕಗಳ ಮುಖಂಡರಾದ ರಾಘವೇಂದ್ರ ಪ್ರಸಾದ್, ರವಿಕುಮಾರ್, ಪವಿತ್ರ, ರಾಜೇಶ್ ಮಹದೇವಸ್ವಾಮಿ,‌ ಚಂದನ್, ಮಲ್ಲೇಶ್, ಜಯಶಂಕರ್, ಹರೀಶ್, ಸತೀಶ್, ರಮೇಶ್, ಅರವಿಂದ್, ಅಕ್ಕಮಹಾದೇವಿ ‌ಮತ್ತು‌ ಕಾರ್ಮಿಕರು ಇದ್ದರು.

ರಾಯಚೂರು ನಗರದ ಟಿಪ್ಪು ಸುಲ್ತಾನ್ ಗಾರ್ಡನ್ ಎದುರು ಎಐಸಿಸಿಟಿಯು ವತಿಯಿಂದ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ವಿಜಯಪುರ | ಹೊರ್ತಿಯಲ್ಲಿ ಬಸ್ ನಿಲ್ದಾಣವಿಲ್ಲದೆ ಜನ ತತ್ತರ: ಸಮಸ್ಯೆ ಪರಿಹಾರಕ್ಕೆ ಮುಂದಾಗುವುದೇ ಸರ್ಕಾರ?

“ಕಾರ್ಮಿಕ ಕಾಯ್ದೆಯಿಂದ ಸಿಗಬೇಕಾದ ಎಲ್ಲ ಹಕ್ಕುಗಳನ್ನು ಕಸಿದು ಕಾರ್ಮಿಕರನ್ನು ಕಾರ್ಮಿಕ ಕುಟುಂಬಗಳನ್ನು ಬೀದಿಪಾಲು ಮಾಡುವ ಈ ನಾಲ್ಕು ಸಂಹಿತೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಕಾರ್ಮಿಕರು, ಕಾರ್ಮಿಕ ಸಂಘಟನೆಗಳಿಂದ ಬಹುದೊಡ್ಡ ಹೋರಾಟಕ್ಕೆ ಕರೆ ನೀಡಲಾಗುವುದು”‌ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು,

ಎಐಸಿಸಿಟಿಯು ರಾಯಚೂರು ಜಿಲ್ಲಾಧ್ಯಕ್ಷ ಅಝೀಝ್ ಜಾಗೀರ್ದಾರ್, ಮುಖಂಡರಾದ ಜೀಲಾನಿ ಪಾಷಾ, ಜಗದೀಶ್, ನಿಸಾರ್ ಅಹ್ಮದ್, ಭೀಮಣ್ಣ, ಮುಹಮ್ಮದ್ ಮೂವೀಸ್, ಹನೀಫ್ ಅಬಕಾರಿ, ಮಾರಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...