ಬೀದರ್‌ | ಸಂವಿಧಾನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಿ : ವಿನೋದ್‌ ರತ್ನಾಕರ್‌

Date:

ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ಭಾರತೀಯ ಪ್ರಜೆಗಳಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ಈ ದೇಶಕ್ಕೆ ಕೊಟ್ಟಿದ್ದಾರೆ. ಆದರೆ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ತಮ್ಮ ಸ್ವಾರ್ಥಪೂರಿತ ಉದ್ದೇಶಗಳಿಗೆ ಹೊಸ ಸಂವಿಧಾನ ರಚನೆಯ ಆಶಯಗಳನ್ನು ವ್ಯಕ್ತಪಡಿಸುತ್ತಿದ್ದು, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ಯುನಿಟಿ ಮೂಮೆಂಟ್‌ ಸಂಸ್ಥಾಪಕ ವಿನೋದ ರತ್ನಾಕರ್‌ ಒತ್ತಾಯಿಸಿದ್ದಾರೆ.

ʼಹೊಸ ಸಂವಿಧಾನ ರಚನೆಯ ಉದ್ದೇಶವು ದೇಶದ ಏಕತೆ, ಅಖಂಡತೆ ಮತ್ತು ಪ್ರಜಾಪ್ರಭುತ್ವ ವಿರುದ್ಧದ ಒಂದು ಕೃತ್ಯ. ಈ ರೀತಿಯ ಚಟುವಟಿಕೆಗಳು ಸಂವಿಧಾನದ ಮೂಲಭೂತ ತತ್ವಗಳನ್ನು ಘಾಸಿಗೊಳಿಸಲು ಯತ್ನಿಸುತ್ತವೆ. ಇದನ್ನು ಯಾವುದೇ ರೀತಿಯಲ್ಲಿ ಸಹಿಸಲಾಗುವುದಿಲ್ಲʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಭಾರತದ ಸಂವಿಧಾನವು ಎಲ್ಲ ಧರ್ಮಗಳಿಗೂ ಸಮಾನ ಮಹತ್ವವನ್ನು ಒದಗಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಲಿಂಗ, ಜಾತಿ, ಧರ್ಮ, ಭಾಷೆ ಎಂಬ ಭೇದವಿಲ್ಲದೆ ಪ್ರತಿಯೊಬ್ಬ ವ್ಯಕ್ತಿಗೆ ಸಮಾನ ಅವಕಾಶವನ್ನು ನೀಡುತ್ತದೆ. ಸಮಾಜದಲ್ಲಿ ಇರುವ ಅಸಮಾನತೆಗಳನ್ನು ಪರಿಹರಿಸಲು ಕಾನೂನು ಮತ್ತು ಆಡಳಿತ ಕ್ರಮಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುತ್ತದೆ. ಹೀಗಾಗಿ ದೇಶದ ಸಂವಿಧಾನದ ಶ್ರೇಷ್ಠತೆಯನ್ನು ಯಾವ ಕಾರಣಕ್ಕೂ ಬದಲಿಸುವ ಅಗತ್ಯವಿಲ್ಲ. ಅದರ ಪ್ರತಿಯೊಂದು ಪ್ರಕರಣವು ಭಾರತದ ಪ್ರಗತಿಯನ್ನು ದೃಢಪಡಿಸಲು ರೂಪಿತವಾಗಿದೆʼ ಎಂದು ವಿಶ್ಲೇಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ʼಸಂವಿಧಾನ ವಿರೋಧಿ ಕೃತ್ಯಗಳಿಗೆ ಜವಾಬ್ದಾರಿ ಆಗಿರುವವರನ್ನು ಗುರುತಿಸಿ, ಅವರ ವಿರುದ್ಧ ಸರ್ಕಾರ ಹಾಗೂ ಪೊಲೀಸ್ ಇಲಾಖೆಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವವನ್ನು ವಿವರಿಸುವ ಜಾಗೃತಿ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸಬೇಕು. ದೇಶದ ಸಂವಿಧಾನ ವಿರೋಧಿ ಚಟುವಟಿಕೆಗಳ ಕುರಿತು ತಕ್ಷಣವೇ ಗಂಭೀರ ತನಿಖೆ ನಡೆಸಿ, ಸಂವಿಧಾನಕ್ಕೆ ಹಾನಿಯಾಗುವುದು ತಪ್ಪಿಸಬೇಕು. ಭಾರತದ ಸಂವಿಧಾನ ಬದಲಾಯಿಸಲು ಯತ್ನಿಸುವಂತಹ ಅಪ್ರಜಾಪ್ರಭುತ್ವ ಶಕ್ತಿಗಳ ವಿರುದ್ಧ ಕಠಿಣ ಕಾನೂನುಬದ್ಧ ಕ್ರಮ ಜರುಗಿಸಲು ಹೊಸ ಕಾನೂನುಗಳ ಪ್ರಸ್ತಾಪ ಮಾಡಬೇಕುʼ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...