ಬೀದರ್‌ | ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ : ವಸತಿ ಶಾಲೆ ಪ್ರಾಂಶುಪಾಲ, ವಾರ್ಡನ್‌ ಅಮಾನತು

Date:

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಔರಾದ್ ತಾಲೂಕಿನ ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಭಗವಾನ್ ಕಾಂಬಳೆ ಹಾಗೂ ಪ್ರಭಾರ ನಿಲಯಪಾಲಕ ಶಿವಕುಮಾರ್ ವೈಜಪ್ಪ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್. ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಹಾಗೂ ವಸತಿ ಶಾಲೆಯ ಕೆಲ ಅವ್ಯವಸ್ಥೆ ಕುರಿತು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿಲಾಗಿತ್ತು. ಉಪನಿರ್ದೇಶಕರು ವಸತಿ ಶಾಲೆಗೆ ಭೇಟಿ ನೀಡಿದಾಗ ಪ್ರಾಂಶುಪಾಲ ಹಾಗೂ ನಿಲಯಪಾಲಕರ ಕಾರ್ಯವೈಖರಿಯಲ್ಲಿನ ಲೋಪದೋಷ ಕಂಡು ಬಂದಿದೆ. ಇಲಾಖೆಯ ನೋಟಿಸ್‌ಗೆ ಸಮಂಜಸ ಉತ್ತರ ನೀಡದಿರುವ ಕುರಿತು ನೀಡಿದ ವರದಿ ಆಧಾರದ ಮೇಲೆ ಇವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಡಿ.11ರಂದು ಶಾಲೆಯ ವಿದ್ಯಾರ್ಥಿಗಳು ಪ್ರಾಂಶುಪಾಲ ಹಾಗೂ ಪ್ರಭಾರ ವಾರ್ಡನ್‌ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಚ್.ಎಸ್.ಸಿಂಧು ಹಾಗೂ ರಾಜ್ಯ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಘಟನೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...