ಕರ್ತವ್ಯ ಲೋಪ ಆರೋಪ ಹಿನ್ನಲೆಯಲ್ಲಿ ಗದಗ ಗ್ರಾಮೀಣ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಎಂ.ಎಂ.ನದಾಫ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಆದೇಶ ಹೊರಡಿಸಿದ್ದಾರೆ.
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಆವರಣದಲ್ಲಿರುವ ಮೆಡಿಕಲ್ ಸ್ಟೋರ್‌ನಲ್ಲಿ ಸ್ಯಾನಿಟರಿ ಪ್ಯಾಡ್ ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕ ಮತ್ತು ಮಾಲೀಕನ ನಡುವೆ ನಡೆದ ಗಲಾಟೆ ಹಾಗೂ ಅಡವಿಸೋಮಾಪುರ ತಾಂಡಾದಲ್ಲಿನ ಎರಡು ಕುಟುಂಬಗಳ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
“ಈ ಎರಡು ಪ್ರಕರಣಗಳನ್ನು ನಿಭಾಯಿಸುವಲ್ಲಿ ಕರ್ತವ್ಯ ಲೋಪ, ಲಂಚ ಸ್ವೀಕರಿಸಿದ ಆರೋಪ ಸೇರಿ ಹಲವಾರು ಪ್ರಕರಣಗಳಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನಲೆಯಲ್ಲಿ ಗದಗ ಡಿವೈಎಸ್‌ಪಿ ಅವರು ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು.
ಇನ್‌ಸ್ಪೆಕ್ಟರ್ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ನರಗುಂದ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರಾಥಮಿಕ ತನಿಖೆಗೆ ಆದೇಶ ಮಾಡಲಾಗಿದೆ. ವಿವರವಾದ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.





