ಬೀದರ್‌ | ಅಕ್ರಮವಾಗಿ ಡಿಜಿಟಲ್‌ ಖಾತಾ ವಿತರಣೆ ಆರೋಪ; ಜನವಾಡ ಪಿಡಿಒ ಅಮಾನತು

Date:

ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಡಿಜಿಟಲ್ ಖಾತೆಗಳನ್ನು ವಿತರಿಸಿದ ಆರೋಪದ ಮೇರೆಗೆ ಬೀದರ್ ತಾಲೂಕಿನ ಜನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸವಿತಾ ಹಿರೇಮಠ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಆದೇಶ ಹೊರಡಿಸಿದ್ದಾರೆ.

ಪಿಡಿಒ ಸವಿತಾ ಹಿರೇಮಠ ಅವರು ಭಾಗ್ಯವಂತಿ ಲೇಔಟ್‌ನ ನಮೂನೆ -9 ಹಾಗೂ ನಮೂನೆ-11(ಎ) ಡಿಜಿಟಲ್‌ ಖಾತೆಗಳನ್ನು ವಿತರಿಸಲು ಗ್ರಾಮ ಪಂಚಾಯತಿ ಬ್ಯಾಂಕ್‌ ಖಾತೆಗೆ 2.11 ಲಕ್ಷ ಹಣ ಪಾವತಿ ಮಾಡಿರುವುದು ಪಿಡಿಒ ಅವರು ಸಲ್ಲಿಸಿರುವ ದಾಖಲೆಗಳಿಂದ ಕಂಡು ಬಂದಿದೆ.

ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಎಚ್ಚರಿಸಿದೆ ಅನುಮೋದನೆ ಪಡೆಯದೆ ಜನವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭಾಗ್ಯವಂತಿ ಹೈಟೆಕ್ ಲೇಔಟ್‌ನಲ್ಲಿ ಸುಮಾರು 200 ಡಿಜಿಟಲ್ ಖಾತೆಗಳನ್ನು ವಿತರಿಸಿದ್ದಾರೆ. ಇದು ಸರ್ಕಾರದ ಮಾರ್ಗಸೂಚಿಗೆ ವಿರುದ್ಧವಾದದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...