ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ; ಟೆಂಡರ್ ಸ್ಥಗಿತಗೊಳಿಸಲು ಆಗ್ರಹ

Date:

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು ನಡೆಸಲು 25 ಪ್ಯಾಕೇಜ್‌ಗಳಿಗೆ ಟೆಂಡರ್ ಆಹ್ವಾನಿಸಿದೆ. ಆದರೆ, ಈ ಪ್ರಕ್ರಿಯೆಯು ಕೆಪಿಟಿಟಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನೈಜ ಹೋರಾಟಗಾರರ ವೇದಿಕೆ ಆರೋಪಿಸಿದೆ.

ಕಾಯ್ದೆಯ ಉಲ್ಲಂಘನೆ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ವೇದಿಕೆಯ ಮುಖಂಡ ಎಚ್.ಎಂ ವೆಂಕಟೇಶ್ ಮತ್ತು ಹಂದ್ರಾಳ್ ನಾಗಭೂಷಣ್ ಕುಣಿಗಲ್ ನರಸಿಂಹಮೂರ್ತಿ ಪತ್ರ ಬರೆದಿದ್ದಾರೆ. “ನಿಗಮವು ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಿದೆ.  ಟೆಂಡರ್‌ಗೆ ಬಿಡ್‌ ಮಾಡಲು ಕೆಪಿಟಿಸಿ ಕಾಯ್ದೆ ಪ್ರಕಾರ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ನಿಗಮವು 15 ದಿನದೊಳಗೆ ಟೆಂಡರ್‌ ಪ್ರಕ್ರಿಯೆ ಮುಗಿಸಲು ತೀರ್ಮಾನಿಸಿದೆ. ಇದು ಅವ್ಯವಹಾರಕ್ಕೆ ಎಡೆಮಾಡಿಕೊಡುತ್ತದೆ” ಎಂದು ಆರೋಪಿಸಿದ್ದಾರೆ.

“ನಿಗಮದ ಕೆಲವು ಅಧಿಕಾರಿಗಳು ಮೊದಲೇ ನಿರ್ಧರಿಸಿದ ಕಾಂಟ್ರಾಕ್ಟರ್‌ಗಳೊಂದಿಗೆ ಕೈಜೋಡಿಸಿರುವಂತಿದೆ. ಬಹು ಪಾಲು ಟೆಂಡರ್‌ಗಳನ್ನು ತಮಗೆ ಬೇಕಿರುವ ಗುತ್ತಿಗೆದಾರರಿಗೆ ನೀಡುವ ಉದ್ದೇಶದಿಂದ ಅಕ್ರಮವಾಗಿ ಟೆಂಡರ್ ಪ್ರಕ್ರಿಯೆಯನ್ನು 2024ರ ಫೆಬ್ರವರಿ 23ರಂದು ಮುಗಿಸಿದ್ದಾರೆ. ನಮಗೆ ಬಂದ ಮಾಹಿತಿ ಆಧಾರದಲ್ಲಿ ಬಿಡ್ ತೆರೆಯುವ ಮೊದಲೇ ಕಾಂಟ್ರಾಕ್ಟರ್‌ಗಳನ್ನು ನಿರ್ಧರಿಸಿ ಪಟ್ಟಿ ಮಾಡಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟೆಂಡರ್ ಪ್ರಕ್ರಿಯೆಯನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳವರೆಗೆ ಕಾಲಾವಕಾಶ ನೀಡಬೇಕು. ಈ ವಿಷಯದಲ್ಲಿ ಟೆಂಡರ್ ಪ್ರಕಟಣೆಗೊಂಡರೂ ಸಹಿತ ಪೋರ್ಟ್‌ನಲ್ಲಿ ಮಾತ್ರ ಕಾಮಗಾರಿಯ ಬಗ್ಗೆ ವಿವರವಾದ ಪೂರ್ಣ ಪ್ರಮಾಣದ ಮಾಹಿತಿಯನ್ನು ತಡವಾಗಿ ದಿನಾಂಕ: 07/02/24 ಮತ್ತು 08/02/24 ರಂದು ಪ್ರಕಟಿಸಿದ್ದಾರೆ. ಇದರಿಂದ, ಕೆಪಿಟಿಟಿ ಆಕ್ಟ್ ಉಲ್ಲಂಘನೆ ಆಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಹೇಳಿದ್ದಾರೆ.

“ಮುಖ್ಯವಾಗಿ ಟೆಂಡರ್ ಬಿಡ್ ತೆರೆಯುವ ಮೊದಲೇ ಯಾವ ಯಾವ ಕಾಮಗಾರಿಗಳನ್ನು ಯಾವ ಯಾವ ಕಾಂಟ್ರಾಕ್ಟರ್‌ಗಳಿಗೆ ಕೊಡಬೇಕೆಂಬುದನ್ನು ನಿಗದಿಪಡಿಸಿ ಪಟ್ಟಿ ಮಾಡಲಾಗಿದೆ ಎಂಬ ಮಾಹಿತಿ ಸಾರ್ವಜನಿಕರ ಗಮನಕ್ಕೆ ಬಂದಿರುವುದು ದುರಾದೃಷ್ಟಕರ ವಿಷಯವಾಗಿದೆ. ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತು ಕೆಪಿಟಿಟಿ ಆಕ್ಟ್ ಗೆ ಧಕ್ಕೆ ಉಂಟಾಗಿರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ, ಕರ್ತವ್ಯ ಲೋಪ ಮತ್ತು ಕಾಯ್ದೆಗಳ ಉಲ್ಲಂಘನೆಯಾಗಿದ್ದಲ್ಲಿ ತಕ್ಷಣ ಟೆಂಡರ್ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...