ಕೆ ಆರ್ ಪೇಟೆ | ವಕೀಲರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪ; ಸೂಕ್ತ ಕ್ರಮಕ್ಕೆ ಆಗ್ರಹ

Date:

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ದಲಿತ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿರುವ ವಕೀಲ ಕೆ. ಬೋರೇಗೌಡ ಅವರು ತಮ್ಮ ಕಚೇರಿಗೆ ಬಂದಿದ್ದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ನಾಗೇಗೌಡ ಮತ್ತು ಪದಾಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುತ್ತಾರೆ. ಈ ಸಂಬಂಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವಕೀಲ ಕೆ. ಬೋರೇಗೌಡ ಸಹ ತಮ್ಮ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿ ದೂರು ನೀಡಿದ್ದಾರೆ. ಹಾಗಾಗಿ, ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ವಹಿಸುವಂತೆ ತಾಲ್ಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಆರ್. ಪ್ರಸನ್ನಕುಮಾರ್ ಕೋರಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಆರ್. ಪ್ರಸನ್ನಕುಮಾರ್ ಅವರು ವಕೀಲರಾದ ಕೆ.ಬೋರೇಗೌಡ ಅವರು 2014ರಿಂದ 2017ವರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯ ಲಕ್ಷಾಂತರ ರೂಪಾಯಿಗಳನ್ನು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ದುರುಪಯೋಗ ಮಾಡಿಕೊಂಡಿದ್ದಾರೆ. ಸದರಿ ಪ್ರಕರಣದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆದು ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಜೈಲಿಗೂ ಸಹ ಹೋಗಿ ಬಂದಿದ್ದಾರೆ. ಇದರಿಂದಾಗಿ ತಾಲ್ಲೂಕು ವಕೀಲರ ಸಂಘದಲ್ಲಿ ಅವರಿಗೆ ಸದಸ್ಯತ್ವ ನಿರಾಕರಿಸಲಾಗಿದೆ. ಇದರಿಂದಾಗಿ ಸಂಘಕ್ಕೆ ಕೆಟ್ಟ ಹೆಸರ ತರಬೇಕೆಂಬ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಐದಾರು ವರ್ಷಗಳಿಂದಲೂ ಕೆ.ಆರ್.ಪೇಟೆಯಲ್ಲಿ ಅಪಘಾತ ಪ್ರಕರಣಗಳಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ವಿಮಾ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಕಳೆದ ಬುಧವಾರ ತಾಲ್ಲೂಕಿನ ಗವಿರಂಗನಾಥ ದೇವಾಲಯದಲ್ಲಿ ನಡೆದ ಅಪಘಾತ ಒಂದರಲ್ಲಿ ಸಾರಂಗಿ ಗ್ರಾಮದ ಶಾಂತಮ್ಮ ಮತ್ತು ಸರೋಜಮ್ಮ ಎಂಬ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಸದರಿ ಮೃತ ಮಹಿಳೆಯರ ಸಂಬಂಧಿಕರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ನಾಗೇಗೌಡ ಅವರನ್ನು ಸಂಪರ್ಕಿಸಿ ಘಟನೆಯ ಸಂಬಂಧ ವಿಮಾ ಪರಿಹಾರವನ್ನು ಕೊಡಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಎಂ.ಆರ್. ನಾಗೇಗೌಡ ಅವರು ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರದ ಬಳಿ ಹೋಗಿ ಈ ಕೇಸನ್ನು ನನಗೆ ಕೊಡಿ ಕಡಿಮೆ ಶುಲ್ಕದಲ್ಲಿ ಹೆಚ್ಚಿನ ಪರಿಹಾರ ಕೊಡಿಸುತ್ತೇನೆ ಎಂದು ಹೇಳಿದ್ದಲ್ಲದೇ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಎಂ.ಆರ್.ನಾಗೇಗೌಡರ ಬಗ್ಗೆ ಲಘುವಾಗಿ ಮಾತನಾಡಿ ಟೀಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಕೀಲ ಕೆ. ಬೋರೇಗೌಡ ಮತ್ತು ಎಂ.ಆರ್. ನಾಗೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿರುವುದು ನಿಜ, ಆದರೆ, ಯಾವುದೇ ಹಲ್ಲೆಯಾಗಲಿ, ಹೊಡೆದಾಟವಾಗಲಿ ನಡೆದಿಲ್ಲ. ಆದರೂ ಸಹ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಕೆಟ್ಟ ಹೆಸರು ತರಬೇಕು ಎಂಬ ದುರುದ್ದೇಶದಿಂದ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಎಂ.ಆರ್. ಪ್ರಸನ್ನಕುಮಾರ್ ಹೇಳಿದರು.

ವಕೀಲ ಕೆ.ಬೋರೇಗೌಡ ಅವರು ಜನಸಾಮಾನ್ಯರಿಗೆ ತುಂಬಾ ತೊಂದರೆ ನೀಡುತ್ತಾ ಬಂದಿದ್ದು ವಕೀಲ ವೃತ್ತಿಯ ಗೌರವವನ್ನು ಹಾಳು ಮಾಡುತ್ತಿದ್ದಾರೆ. ಇದರಿಂದಾಗಿ, ತಾಲ್ಲೂಕು ವಕೀಲರ ಸಂಘದ 180 ಸದಸ್ಯರ ಪೈಕಿ ಒಬ್ಬರೇ ಒಬ್ಬ ವಕೀಲರೂ ಸಹ ಕೆ.ಬೋರೇಗೌಡ ಅವರ ಪರ ಇಲ್ಲ.

ಕಡಿಮೆ ಫೀಜು ಕೊಡಿ ಎಂದು ಹೇಳುವುದು, ವಿಮಾ ಕಂಪನಿಯಿಂದ ವಿಮಾ ಪರಿಹಾರದ ಬಿಡುಗಡೆಯಾದ ಸಂದರ್ಭದಲ್ಲಿ ಹೆಚ್ಚಿನ ಫೀಜು ವಸೂಲಿ ಮಾಡುವ ಮೂಲಕ ಕಕ್ಷೀದಾರರಿಂದಲೂ ನ್ಯಾಯಾಲಯದ ಆವರಣದಲ್ಲಿಯೇ ಛೀಮಾರಿ ಹಾಕಿಕೊಂಡಿದ್ದಾರೆ. ಇದರಿಂದ ವಕೀಲ ವೃತ್ತಿಗೆ ಅವಮಾನ ಆಗುತ್ತಿದೆ. ಆದರೂ ತಮ್ಮ ಮೇಲೆ ಎಫ್.ಐ.ಆರ್ ದಾಖಲಾಗಿದ್ದರು ಮಾಧ್ಯಮಗಳ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ತಾಲ್ಲೂಕು ವಕೀಲರ ಸಂಘ ಹಾಗೂ ಹಿರಿಯ ವಕೀಲರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ದ ದಾಖಲೆ ಬಿಡುಗಡೆ ಮಾಡಿ ಕಾನೂನು ಬಾಹಿರ ಕೃತ್ಯಗಳಲ್ಲಿ ಬಾಗಿಯಾಗಿ ವಕೀಲರಿಗೆ ಅವಮಾನ ಮಾಡುತ್ತಿದ್ದಾರೆ.

ಪೊಲೀಸರಿಗೆ ನೀಡಿರುವ ದೂರಿನಲ್ಲಿ ಯಾವುದೇ ಹುರಳಿಲ್ಲ. ಸುಳ್ಳು ದೂರು ದಾಖಲಿಸುವ ಮೂಲಕ ತಾಲ್ಲೂಕು ವಕೀಲರ ಸಂಘಕ್ಕೆ ಹಾಗೂ ಸಂಘದ ಪದಾಧಿಕಾರಿಗಳಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೃಷ್ಣರಾಜನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ದಿನದಂದು ಗೌರವ ಸಲ್ಲಿಸಿದ ಶಾಸಕ ಡಿ ರವಿಶಂಕರ್

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರಾದ ಕೆ.ಎನ್. ನಾಗೇಗೌಡ, ಕೆ.ಆರ್. ಮಹೇಶ್, ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷ ಪುರುಷೋತ್ತಮ್, ನಿರಂಜನ್, ಶಂಕರೇಗೌಡ ಸೇರಿದಂತೆ ಹಲವು ವಕೀಲರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...