ಆಲಮಟ್ಟಿ | 136 ಕೆರೆಗಳಿಗೆ ನೀರು ಹರಿಸುವ ಪ್ರಕ್ರಿಯೆ ಆರಂಭ

Date:

“ಜಾನುವಾರು ಕುಡಿಯುವ ನೀರಿನ ಉದ್ದೇಶದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದ ಕಾಲುವೆಗಳ ಜಾಲಗಳ ಮೂಲಕ ವಿಜಯಪುರ ಜಿಲ್ಲೆಯ 124, ಬಾಗಲಕೋಟೆ ಜಿಲ್ಲೆಯ 12 ಸೇರಿ ಸುಮಾರು 136 ಕೆರೆಗಳಿಗೆ ನೀರು ಹರಿಸುವ ಪ್ರಕ್ರಿಯೆ ಶನಿವಾರ ಆರಂಭಗೊಂಡಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಏತ ನೀರಾವರಿ (ಎಂಎಲ್‌ಐ) ಮತ್ತು ಚಿಮ್ಮಲಗಿ ಏತನೀರಾವರಿ, ಹೆರಕಲ್ಪ ಏತ ನೀರಾವರಿ ಯೋಜನೆಗಳು ಸೇರಿ ಈ ಮೂರು ಯೋಜನೆಗಳ ಹಂತ-2 ಮತ್ತು ಹಂತ-3 ಕಾಲುವೆಗಳ ಜಾಲಕ್ಕೆ ನೀರು ಹರಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಕೆರೆಗಳ ಭರ್ತಿಗಾಗಿ 7 ಟಿಎಂಸಿ ಅಡಿ ನೀರು ಮೀಸಲಿರಿಸಿದ್ದು, ಈಗಾಗಲೇ ಕಳೆದ ಡಿಸೆಂಬರ್ ನಿಂದ ಜನವರಿಗೆ 9ರ ವರೆಗೆ 7 ಟಿಎಂಸಿ ಅಡಿ ಪೈಕಿ 0.78 ಟಿಎಂಸಿ ಅಡಿ ನೀರನ್ನು ಕೆರೆಗಳಿಗೆ ಹರಿಸಲಾಗಿತ್ತು. ಬೇಸಿಗೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಕೆರೆಗಳಲ್ಲಿರುವ ನೀರಿನ ಸಂಗ್ರಹ ಕಡಿಮೆಯಾದ ಕಾರಣ ಕೆರೆಗಳಿಗೆ ನೀರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಸಲು ರೈತರು ಆಗ್ರಹಿಸಿದ್ದರು. ಕಳೆದ ವಾರ ಎಂಎಲ್ ಐ ಕಾಲುವೆಯ ಮುಖ್ಯ ಸ್ಥಾವರ ಮಸೂತಿ ಬಳಿ ರೈತರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಜಿಲ್ಲೆಯ ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಮೌಖಿಕವಾಗಿ ಕೋರಿದ್ದರು. ಅದಕ್ಕಾಗಿ ಬಾಕಿ ಉಳಿದ 6.11 ಟಿಎಂಸಿ ಅಡಿ ನೀರಲ್ಲಿ 1.50 ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿಗಾಗಿ ಬಳಸಲು ಆರ್ ಬಿ ತಿಮ್ಮಾಪುರ ಅನುಮತಿ ನೀಡಿದ್ದು,ಶೇ. 80ಕಿಂತ ಕಡಿಮೆ   ನೀರು ಸಂಗ್ರಹವಿರುವ ಕೆರೆಗಳಿಗೆ ನೀರು ಹರಿಸಲು ಆರಂಭಗೊಂಡಿದೆ.

ಎಂಎಲ್ ಐ ಕಾಲುವೆಗಳಿಗೆ 1 ಟಿಎಂಸಿ ಅಡಿ, ಚಿಮ್ಮಲಗಿ ಏತ ನೀರಾವರಿ ಯೋಜನೆಗೆ 0.44 ಟಿಎಂಸಿ ಅಡಿ, ಹೆರಕಲ್ ಏತ ನೀರಾವರಿ ಯೋಜನೆಗೆ 0.06 ಟಿಎಂಸಿ ಅಡಿ ನೀರು ಹರಿಸಲಾಗುತ್ತಿದೆ. ಕೆರೆಗಳ ಭರ್ತಿಯಾದ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...