ಉಡುಪಿ | ಆಳ್ವಾಸ್ ನುಡಿಸಿರಿ ವಿರಾಸತ್ ವತಿಯಿಂದ, ಆಳ್ವಾಸ್ ಸಾಂಸ್ಕೃತಿಕ ವೈಭವ

Date:

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಪರಮಪೂಜ್ಯ ಸುಶ್ರೀಂದ್ರ ತೀರ್ಥಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಆಳ್ವಾಸ್ ನುಡಿಸಿರಿ-ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ, ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ದಶಂಬರ್ 13, ಶನಿವಾರದಂದು ಸಂಜೆ 5:45 ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಹಿಸಲಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ತಿಳಿಸಿದರು.

ಅವರು ಉಡುಪಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾಕರ‍್ಯಕ್ರಮವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರಮಪೂಜ್ಯ ಸುಶ್ರೀಂದ್ರ ತೀರ್ಥಶ್ರೀಪಾದರು ಉದ್ಘಾಟಿಸಿದರೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕರ‍್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿ ಹಾಜರಿರಲಿದ್ದಾರೆ. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ ವಿಎಸ್ ಆಚಾರ್ಯರವರಿಗೆ ಅರ್ಪಿಸಲಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ಆರಂಭದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಫ್ಯೂ಼ಷನ್ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಟಿಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಧ್ಯಕ್ಷ ವಿ. ಜಿ. ಶೆಟ್ಟಿ, ಉಡುಪಿ ಘಟಕದ ಕಾರ್ಯದರ್ಶಿ ಭುವನ ಪ್ರಸಾದ, ಕಾರ್ಯಕ್ರಮ ಸಂಘಟಕರಾದ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಉದ್ಯಮಿ ಹಾಗೂ ಘಟಕದ ಕಾರ್ಯಕಾರಿಣಿ ಸದಸ್ಯ ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...