ಬೀದರ್‌ | ಅಮೆಜಾನ್‌ ಡೆಲಿವರಿ ಯುವಕನ ಮೇಲೆ ಹಲ್ಲೆ: ನಾಲ್ವರ ಬಂಧನ

Date:

ಬೀದರ್‌ ನಗರದ ನ್ಯೂ ಆದರ್ಶ ಕಾಲೋನಿಯ ಅಮೆಜಾನ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಹಾಗೂ ಸಿಬ್ಬಂದಿ ಮೇಲೆ ಯುವಕರ ಗುಂಪೊಂದು‌ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಘಟನೆ ಜರುಗಿದೆ.

ಘಟನೆಯ ಎಲ್ಲಾ ದೃಶ್ಯಾವಳಿಗಳು ಅಮೆಜಾನ್‌ ಕಚೇರಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿತ್ತು. ನಗರದ ಗೌಳಿ ಕಾಲೋನಿಯ ವಿಜಯಕುಮಾರ್‌ ಹಲ್ಲೆಗೊಳಗಾದವರು.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಗಾಂಧಿ ಗಂಜ್‌ ಠಾಣೆಯ ಪೊಲೀಸ್‌ರು ಅಮೆಜಾನ್‌ ಕಚೇರಿಗೆ ತೆರಳಿ ಸಿಸಿ ಟಿವಿ ದೃಶ್ಯವಳಿಗಳನ್ನು ಪರಿಶೀಲಿಸಿದರು. ಘಟನೆಗೆ ಸಂಬಂಧಿಸಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಇನ್ನುಳಿದವರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...