ಉಡುಪಿ | 14 ಚಕ್ರದ ಟ್ರಕ್ ಹರಿದು ಬೈಕ್ ಸವಾರ ಸಾವು

Date:

ಉಡುಪಿ ನಗರದ ಅಂಬಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ, ಹದಿನಾಲ್ಕು ಚಕ್ರಗಳ ಬೃಹತ್ ಗಾತ್ರದ ಟ್ರಕ್ ಹರಿದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ. ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಟ್ರಕ್ ಎಳೆದು ಸಾಗಿಸಿದ್ದು ಅಪಘಾತದ ಭೀಕರತೆ ತೋರಿಸಿದೆ. ಮೃತ ಸವಾರ ದೊಂದುರುಕಟ್ಟೆಯ ಪ್ರದೀಪ (38), ಅಂಬಲಪಾಡಿ ಸುರಭಿ ಆಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳದಲ್ಲಿದ್ದು ಸಂಚಾರಿ ಪೋಲಿಸ್ ಅಧಿಕಾರಿಗಳು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ನೆರವಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...