ಬೀದರ್‌ | ಶೂದ್ರರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ ಅಂಬೇಡ್ಕರ್ : ಕೆ.ನೀಲಾ

Date:

ಶತಮಾನಗಳಿಂದ ಇದ್ದ ಜಾತಿ, ವರ್ಣವ್ಯವಸ್ಥೆ ದಾಸ್ಯದ ಸಂಕೋಲೆಯಿಂದ ಬಿಡುಗಡೆಗೊಳಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಈ ದೇಶ ಇವತ್ತು ಸ್ವಾಭಿಮಾನದಿಂದ ತಲೆಯೆತ್ತಿ ನಡೆಯುತ್ತಿದೆ. ಡಾ. ಅಂಬೇಡ್ಕರ್‌ ಅವರ ಹೋರಾಟದ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿಯಾಗಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಹೇಳಿದರು.

ಬೀದರ್ ನಗರದ ಡಾ.ಚೆನ್ನಬಸವ ಪುಟ್ಟದ್ದೇವರು ರಂಗಮಂದಿರದಲ್ಲಿ ಭಾರತೀಯ ಬೌದ್ಧ ಮಹಾಸಭೆ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಯಿಂದ ಭಾನುವಾರ ಆಯೋಜಿಸಿದ ʼಮಹಿಳಾ ವಿಮೋಚನಾ ದಿನಾಚರಣೆ ಹಾಗೂ ಸಮತಾ ಸೈನಿಕ ದಳ ಸಮಾವೇಶದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು.

ʼಭಾರತದ ಶೂದ್ರರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದ್ದಾರೆ. ಇಂದು ಮಹಿಳೆ ಘನತೆಯಿಂದ ಬದುಕು ನಡೆಸಲು ಸಂವಿಧಾನವೇ ಕಾರಣ. ಸ್ವಾತಂತ್ರ್ಯ ಹಕ್ಕು ಪಡೆದಿದ್ದರಿಂದ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಾಧ್ಯವಾಗುತ್ತಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷೆ ಮಂಜುಳಾ ಭಾವಿದೊಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಒಂದು ಜಾತಿ, ಧರ್ಮಕ್ಕೆ ಸೀಮಿತರಲ್ಲ. ಇಡೀ ಭಾರತೀಯರಿಗೆ ಸಂವಿಧಾನದ ಮೂಲಕ ಸ್ವಾತಂತ್ರ್ಯ, ಸಮಾನತೆ ಹಕ್ಕು ನೀಡಿದವರು. ಎಲ್ಲಾ ಸಮುದಾಯದವರು ಬಾಬಾಸಾಹೇಬರ ಆದರ್ಶಗಳನ್ನು ಪಾಲಿಸಬೇಕುʼ ಎಂದು ಹೇಳಿದರು.

ಮಧ್ಯಾಹ್ನದ ಗೋಷ್ಠಿಯಲ್ಲಿ ನಿವೃತ್ತ ಪ್ರಾಂಶುಪಾಲ ವಿಠಲದಾಸ ಪ್ಯಾಗೆ ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಬುದ್ಧ ಸಮಾಜದ ಪರಿಕಲ್ಪನೆ ವಿಶೇಷ ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಯುವಜನರ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚ

ಸಮಾವೇಶದಲ್ಲಿ ಭಂತೆ ಧಮ್ಮಕೀರ್ತಿ, ಭಂತೆ ಸಂಘ ಸೇವಕ ಸಾನಿಧ್ಯ ವಹಿಸಿದರು. ಭಾರತೀಯ ಬೌದ್ಧ ಮಹಾ ಸಭೆಯ ಜಿಲ್ಲಾಧ್ಯಕ್ಷ ರಾಜಪ್ಪ ಗುನ್ನಳ್ಳಿಕರ್ ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿದರು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವೈಶಾಲಿ ಮೋರೆ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಮುಖರಾದ ಮಲ್ಲಿಕಾರ್ಜುನ ಭಾಲ್ಕೆ, ಮನೋಹರ ಮೋರೆ, ದೇವೇಂದ್ರ ಭಾಲ್ಕೆ, ಜಗನ್ನಾಥ ಕಾಂಬಳೆ, ಶಿವಕುಮಾರ್ ಸದಾಫುಲೆ, ಕಾಶಿನಾಥ ಚೆಲವಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...