ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ ವಿವಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಲಿ: ಸಚಿವ ಸುಧಾಕರ್

Date:

  • ‘ವಿವಿ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು
  • ಉತ್ತಮ ಆರ್ಥಿಕ ತಜ್ಞರನ್ನು ರೂಪಿಸುವ ಜವಾಬ್ದಾರಿ ವಿವಿ ಮೇಲಿದೆ’

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಬೇಕು. ಇಲ್ಲಿಯ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಗುರುವಾರ ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಭೇಟಿ ನೀಡಿ, ಭಾರತದಲ್ಲಿ ಅತ್ಯಂತ ಸದೃಢ ಎಕನಾಮಿಕ್ಸ್ ವಿಶ್ವವಿದ್ಯಾಲಯವಾಗಬೇಕು” ಎಂದು ಆಶಯ ವ್ಯಕ್ತಪಡಿಸಿರು.

“ಅತ್ಯಂತ ಕಡಿಮೆ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಸ್ಕೂಲ್ ಆಫ್ ಎಕನಾಮಿಕ್ಸ್ ಬೆಳೆದಿರುವುದು ಸಂತಸದ ವಿಷಯ. ಮುಂದಿನ ವರ್ಷಗಳಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಆರ್ಥಿಕ ತಜ್ಞರನ್ನು ರೂಪಿಸುವ ಜವಾಬ್ದಾರಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಮೇಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಖಾಲಿ ಹುದ್ದೆ ಭರ್ತಿಗೆ ಮುಂದಾದ ಗೃಹ ಇಲಾಖೆ; ಮುಂದಿನ ವಾರದಲ್ಲಿ ನೂತನ ನೇಮಕಾತಿ

“ಈಗಾಗಲೇ ಕಳೆದ ಮೂರು ನಾಲ್ಕು ವರ್ಷಗಳಿಂದ ಎಕನಾಮಿಕ್ಸ್ ಪದವಿ ಹಾಗೂ ಸ್ನಾತಕೋತ್ತರದಲ್ಲಿ ದೇಶದ ಗಮನಸೆಳೆದಿರುವ ಈ ವಿಶ್ವವಿದ್ಯಾಲಯವು ಮುಂದಿನ ದಿನಗಳಲ್ಲಿ ಅತ್ಯಂತ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಸಾಗಿದೆ. ಇದೇ ರೀತಿ ಇನ್ನೂ ಹೆಚ್ಚು ಪಠ್ಯಕ್ರಮಗಳೊಂದಿಗೆ ಹೆಚ್ಚಿನ ಸಾಧನೆ ಮಾಡಬೇಕು” ಎಂದು ತಿಳಿಸಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ಕುಲಪತಿ, ಕುಲ ಸಚಿವರು ಹಾಗೂ ಬೋಧಕ ಸಿಬ್ಬಂದಿಯೊಂದಿಗೆ ಅಭಿವೃದ್ಧಿ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು. ಇಲ್ಲಿಯ ಶಿಕ್ಷಣ, ಬೋಧಕ ಸಿಬ್ಬಂದಿ ಮತ್ತು ರಾಜ್ಯದ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಅವಕಾಶ ಸೇರಿದಂತೆ ಸಂಪೂರ್ಣ ಮಾಹಿತಿ ಪಡೆದರು. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಕುಲಪತಿ ಎನ್‌ ಆರ್ ಭಾನುಮೂರ್ತಿ, ಕುಲಸಚಿವ ಶೋಭಾ ಬಿ ಹಾಗೂ ಆಡಳಿತ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...